ಸುಬ್ರಹ್ಮಣ್ಯ:ಕುಮಾರ ಪರ್ವತದ ತುತ್ತ ತುದಿಯಲ್ಲಿರುವ ಕುಮಾರನ ಪಾದಕ್ಕೆ ಮತ್ತು ಸಮೀಪದಲ್ಲಿರುವ ವಾಸುಕಿಗೆ ಕುಕ್ಕೆ ಸುಬ್ರಹ್ಮಣ್ಯ ದೇವಳದ ಪ್ರಧಾನ ಅರ್ಚಕ ವೇದಮೂರ್ತಿ ಸೀತಾರಾಮ ಎಡಪಡಿತ್ತಾಯರು ಪೂರ್ವಶಿಷ್ಯ ಸಂಪ್ರದಾಯದ ಪ್ರಕಾರ ಮಾರ್ಗಶಿರ ಷಷ್ಠಿಯ ದಿನವಾದ
ಬುಧವಾರ ಪಂಚಾಮೃತ ಅಭಿಷೇಕ ನೆರವೇರಿಸಿ ಪೂಜೆ ಸಮರ್ಪಿಸಿದರು.ಮಧ್ಯಾಹ್ನ 12ರ ಸುಮುಹೂರ್ತದಲ್ಲಿ ಕುಮಾರಪರ್ವತದ
ತುತ್ತ ತುದಿಯಲ್ಲಿರುವ ಕುಮಾರನ ಪಾದಗಳಿಗೆ ಮತ್ತು ಪಾದದ ಬಳಿಯಿರುವ ವಾಸುಕಿಗೆ ಪ್ರಧಾನ ಅರ್ಚಕರು ವಿವಿಧ ವೈದಿಕ ವಿಧಿ ವಿಧಾನಗಳ ಮೂಲಕ ಪೂಜೆ ಸಲ್ಲಿಸಿದರು. ಕುಕ್ಕೆಯಿಂದ ಸುಮಾರು 12 ಕಿ.ಮೀ. ದೂರವಿರುವ ಎತ್ತರದ ವರ್ವತ ಏರಿ ಪೂಜೆಯಲ್ಲಿ ಭಕ್ತರು ಭಾಗವಹಿಸಿ ಪ್ರಸಾದ ಸ್ವೀಕರಿಸಿದರು.ಈ ಸಂದರ್ಭದೇವಳದ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಅಶೋಕ್ ನೆಕ್ರಾಜೆ, ಸೌಮ್ಯಾ ಭರತ್, ಪ್ರವೀಣ ರೈ ಮರುವಂಜ, ಮಾಸ್ಟರ್ ಪ್ಲಾನ್ ಸಮಿತಿ ಸದಸ್ಯ ಪವನ್ ಎಂ.ಡಿ. ಮತ್ತಿತರರು ಉಪಸ್ಥಿತರಿದ್ದರು.













