ಕೊಲ್ಲಂ: ಖ್ಯಾತ ಮಲಯಾಳಂ ಚಲನಚಿತ್ರ ನಟ ಕುಂಡರ ಜಾನಿ (71) ಹೃದಯಾಘಾತದಿಂದ ಮಂಗಳವಾರ ನಿಧನರಾದರು.
ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ಕೊಲ್ಲಂನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಲಯಾಳಂ ಚಿತ್ರಗಳಲ್ಲಿ ಖಳನಾಯಕ ಪಾತ್ರಗಳಲ್ಲಿ ಮಿಂಚಿದ್ದ ಅವರು, ತಮ್ಮ ಸಿನಿಮಾ ಪಯಣವನ್ನು 1979ರಲ್ಲಿ ಆರಂಭಿಸಿದ್ದರು.ಕಿರೀಡಂ ಮತ್ತು ಚೆಂಕೋಲ್ ಚಿತ್ರಗಳ ಮೂಲಕ ಹೆಚ್ಚು ಪ್ರಸಿದ್ಧಿ ಪಡೆದಿದ್ದರು. 500ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದರು.
previous post