ಸುಳ್ಯ:ಇತ್ತೀಚೆಗೆ ಅಗಲಿದ ಸುಳ್ಯ ತಾಲೂಕು ಬೋರ್ಡ್ ಮಾಜಿ ಅಧ್ಯಕ್ಷ, ದ.ಕ.ಜಿಲ್ಲಾ ಪರಿಷತ್ ಶಿಕ್ಷಣ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ, ಐ. ಕುಂಞಿಪಳ್ಳಿ ಅವರಿಗೆ ಸಾರ್ವಜನಿಕ ನುಡಿ ನಮನ ಮತ್ತು ಶ್ರದ್ದಾoಜಲಿ ಕಾರ್ಯಕ್ರಮ ಸುಳ್ಯ ಅನ್ಸಾರಿಯ ಗಲ್ಫ್ ಆಡಿಟೋರಿಯಂನಲ್ಲಿ ಜರಗಿತು. ಸುಳ್ಯ ವಕೀಲರ ಸಂಘದ ಅಧ್ಯಕ್ಷ ಸುಕುಮಾರ್ ಕೊಡ್ತುಗುಳಿ ಅಧ್ಯಕ್ಷತೆ ವಹಿಸಿದ್ದರು. ಪದ್ಮ ಶ್ರೀ ಪ್ರಶಸ್ತಿ ಪುರಸ್ಕೃತ ಗಿರೀಶ್ ಭಾರದ್ವಾಜ್ ನುಡಿನಮನ ಸಲ್ಲಿಸಿ ಸುಳ್ಯದಲ್ಲಿ ಸಾಮರಸ್ಯ, ಸೌಹಾರ್ದತೆಯ
ಮೇಲ್ಪಂಕ್ತಿ ಹಾಕಿದವರು ಕುಂಞಿಪಳ್ಳಿಯವರು ಎಂದರು. ಸುಳ್ಯ ತಾಲೂಕು ಬಂಟರ ಸಂಘದ ಅಧ್ಯಕ್ಷ ಎನ್. ಜಯಪ್ರಕಾಶ್ ರೈ, ಸುಳ್ಯ ತಾಲೂಕು ಗೌಡ ಯುವ ಸೇವಾ ಸಂಘದ ಅಧ್ಯಕ್ಷ ಪಿ.ಎಸ್. ಗಂಗಾಧರ್, ಸುಳ್ಯ ನಗರ ಪಂಚಾಯತ್ ಮಾಜಿ ಅಧ್ಯಕ್ಷ ಎಂ. ವೆಂಕಪ್ಪ ಗೌಡ, ಜಿಲ್ಲಾ ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಭರತ್ ಮುಂಡೋಡಿ, ಶ್ರೀ ಕ್ಷೇತ್ರ ಕುಕ್ಕೇ ಸುಬ್ರಹ್ಮಣ್ಯ ದೇವಸ್ಥಾನ ವ್ಯವಸ್ಥಾಪನ ಸಮಿತಿ ಮಾಜಿ ಅಧ್ಯಕ್ಷ ನಿತ್ಯಾನಂದ ಮುಂಡೋಡಿ, ರಾಷ್ಟ್ರ ಪ್ರಶಸ್ತಿ ಪುರಸ್ಕೃತ ಶಿಕ್ಷಕ ಕೆ. ಆರ್. ಗಂಗಾಧರ್ ಸುಳ್ಯ ವಾಣಿಜ್ಯ ಮತ್ತು ಕೈಗಾರಿಕೋದ್ಯಮಿಗಳ ಸಂಘದ ಅಧ್ಯಕ್ಷ ಪಿ. ಬಿ. ಸುಧಾಕರ್ ರೈ, ರಾಧಾಕೃಷ್ಣ ಬೊಳ್ಳೂರು, ದಿನೇಶ್ ಮಡಪ್ಪಾಡಿ, ಎಂ.ಬಿ.ಫೌಂಡೇಷನ್ ಅಧ್ಯಕ್ಷ ಎಂ. ಬಿ. ಸದಾಶಿವ, ರಾಜ್ಯ ಕಾರ್ಮಿಕ ಕಲ್ಯಾಣ ಇಲಾಖೆ ಪರಿಷತ್ ರಾಜ್ಯ ಸಮಿತಿ ಸದಸ್ಯ ಕೆ. ಪಿ. ಜಾನಿ, ಶ್ರೀ ಶಾರದಾಂ ಸೇವಾ ಸಮಿತಿ ಗೌರವಾಧ್ಯಕ್ಷ ಗೋಕುಲ್ ದಾಸ್, ಗಾಂಧಿನಗರ ಜುಮ್ಮಾ ಮಸ್ಜಿದ್ ಅಧ್ಯಕ್ಷ ಹಾಜಿ ಮಹಮ್ಮದ್ ಕೆಎಂಎಸ್,ಎಸ್. ಇಬ್ರಾಹಿಂ ಗೂನಡ್ಕ, ಮಹಮ್ಮದ್ ಕುಂಞಿ ಗೂನಡ್ಕ, ಎಸ್. ಸಂಶುದ್ದೀನ್, ಹಮೀದ್ ಕುತ್ತಮೊಟ್ಟೆ, ಚಂದ್ರಶೇಖರ ಪೇರಾಲ್, ದಾಮೋದರ ಗೌಡ ಪ್ರಿನ್ಸಿಪಾಲ್ ಮೊದಲಾದ ಗಣ್ಯರು ಭಾಗವಹಿಸಿದ್ದರು.
ಸುಳ್ಯ ನಗರ ಯೋಜನಾ ಪ್ರಾಧಿಕಾರ (ಸೂಡ ) ಅಧ್ಯಕ್ಷ ಕೆ. ಎಂ. ಮುಸ್ತಫ ಸ್ವಾಗತಿಸಿ, ಕೆಪೆಕ್ ಮಾಜಿ ನಿರ್ದೇಶಕ ಪಿ. ಎ. ಮಹಮ್ಮದ್ ವಂದಿಸಿದರು
ಹಾಫಿಳ್ ಹಾಮಿದ್ ಹಿಮಮಿ ಸಖಾಫಿ ಮೃತರ ಮಗಫಿರತ್ ಗಾಗಿ ಪ್ರಾರ್ಥನೆ ನೆರವೇರಿಸಿದರು.
ಚಿರಶಾಂತಿಗಾಗಿ ಮೌನ ಪ್ರಾರ್ಥನೆ ಸಲ್ಲಿಸಲಾಯಿತು.