ಸುಳ್ಯ: ಕುರುಂಜಿ ವೆಂಕಟ್ರಮಣ ಪಾಲಿಟೆಕ್ನಿಕ್ ನಲ್ಲಿ ದಿ. ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಅವರ ಪುಣ್ಯತಿಥಿ ಅಂಗವಾಗಿ ನುಡಿ ನಮನ ಕಾರ್ಯಕ್ರಮ ನಡೆಯಿತು. ಕೆವಿಜಿ ಪಾಲಿಟೆಕ್ನಿಕ್ನ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ ಯು.ಜೆ ಜಾನಕಿ ವೆಂಕಟ್ರಮಣ ಗೌಡರ ಭಾವಚಿತ್ರದ ಎದುರು ದೀಪ ಬೆಳಗಿಸಿ, ಪುಷ್ಪಾರ್ಚನೆ ಮಾಡಿ, ನುಡಿ ನಮನ ಸಲ್ಲಿಸಿದರು. ಕಾಲೇಜಿನ ಪ್ರಾಂಶುಪಾಲ ಶ್ರೀಧರ್ ಎಂ. ಕೆ, ಉಪ ಪ್ರಾಂಶುಪಾಲ ಅಣ್ಣಯ್ಯ ಕೆ, ಕೆವಿಜಿ ಡೆಂಟಲ್ ಕಾಲೇಜಿನ ಆಡಳಿತ ಅಧಿಕಾರಿ ಮಾಧವ ಬಿಟಿ, ಎಲ್ಲಾ ವಿಭಾಗ ಮುಖ್ಯಸ್ಥರುಗಳು, ಸಿಬ್ಬಂದಿಗಳು ಉಪಸ್ಥಿತರಿದ್ದರು.