ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ 2025-28 ನೆ ಅವಧಿಯ ಆಡಳಿತ ಮಂಡಳಿ ಚುನಾವಣೆಗೆ ಸೋಮವಾರ ಅಧಿಸೂಚನೆ ಪ್ರಕಟಗೊಂಡಿದೆ.ಅಕ್ಟೋಬರ್ 19 ರಿಂದ
ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, (ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ರವರೆಗೆ) ನಾಮಪತ್ರ ಸಲ್ಲಿಸಲು ಅಕ್ಟೋಬರ್ 27 ಕೊನೆಯ ದಿನ. ಅಕ್ಟೋಬರ್ 28 ರಂದು ನಾಮಪತ್ರಗಳ ಪರಿಶೀಲನೆ, ಅ. 30 ರಂದು ನಾಮಪತ್ರಗಳನ್ನು ಹಿಂತೆಗೆದುಕೊಳ್ಳುವ ಕೊನೆಯ ದಿನವಾಗಿರುತ್ತದೆ.ನ. 9 ರಂದು ಬೆಳಿಗ್ಗೆ 9 ರಿಂದ ಮಧ್ಯಾಹ್ನ 3 ಗಂಟೆವರೆಗೆ ವಾರ್ತಾ ಭವನದಲ್ಲಿ ಮತದಾನ ನಡೆಯಲಿದೆ. ಬಳಿಕ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟವಾಗಲಿದೆ. ಮತದಾರರ ಪಟ್ಟಿಯನ್ನು ವಾರ್ತಾಭವನದಲ್ಲಿ ಪ್ರಕಟಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಚುನಾವಣಾಧಿಕಾರಿ, ವಾರ್ತಾಧಿಕಾರಿ ಬಿ.ಎ ಖಾದರ್ ಶಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.















