ಮಂಗಳೂರು: ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಸುವರ್ಣ ಸಂಭ್ರಮ ಸವಿ ನೆನಪಿಗಾಗಿ ಅಂಚೆ ಚೀಟಿ ಬಿಡುಗಡೆ ಕಾರ್ಯಕ್ರಮ ಅಕ್ಟೋಬರ್ 6 ರಂದು ಬೆಳಿಗ್ಗೆ 10.45 ಗಂಟೆಗೆ ಪತ್ರಿಕಾ ಭವನ ದಲ್ಲಿ ನಡೆಯಲಿದೆ.ಮಾಜಿ
ಸಂಸದ ನಳಿನ್ ಕುಮಾರ್ ಕಟೀಲ್ ಅಂಚೆ ಚೀಟಿ ಬಿಡುಗಡೆ ಮಾಡಲಿದ್ದಾರೆ. ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್, ಭಾರತೀಯ ಅಂಚೆ ಇಲಾಖೆಯ ಹಿರಿಯ ಅಧೀಕ್ಷಕ ಸುಧಾಕರ್ ಮಲ್ಯ, ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ ಮುಖ್ಯ ಅತಿಥಿ ಗಳಾಗಿ ಭಾಗವಹಿಸಲಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಲಿದ್ದಾರೆ.















