ಮಂಗಳೂರು:ವಿದ್ಯಾರ್ಥಿಗಳು ಉತ್ತಮ ಶಿಕ್ಷಣ ಪಡೆದು ಸಮಾಜಕ್ಕೆ ಕೊಡುಗೆ ನೀಡುವ ಉನ್ನತ ಗುರಿಯೊಂದಿಗೆ ಮುನ್ನಡೆಯಿರಿ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಯುವ ವಿದ್ಯಾರ್ಥಿ ಗಳಿಗೆ ಕರೆ ನೀಡಿದರು.ಅವರು ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘದ ವತಿಯಿಂದ ಪತ್ರಿಕಾಭವನದಲ್ಲಿ ರವಿವಾರ 2023-24 ರ ಸಾಲಿನಲ್ಲಿ ಪಿ ಯು ಸಿ ಹಾಗೂ
ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ. 90 ಕ್ಕೂ ಹೆಚ್ಚು ಅಂಕ ಗಳಿಸಿದ ಪತ್ರಕರ್ತರ ಮಕ್ಕಳಿಗೆ ಪ್ರತಿಭಾ ಪುರಸ್ಕಾರವನ್ನು ನೆರವೇರಿಸಿ ಮಾತನಾಡುತ್ತಿದ್ದರು.ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಇದೇ ಸಂದರ್ಭದಲ್ಲಿ 64 ವರ್ಷಗಳಿಂದ ಪತ್ರಿಕೆ ವಿತರಣೆ ಮಾಡುತ್ತಿರುವ 82ರ ಹರೆಯದ ರಮೇಶ್, ವಿನೂತನ ರೀತಿಯಲ್ಲಿ ಮತದಾನ ಹಾಗೂ ಡೆಂಗ್ಯು ಜಾಗೃತಿ ಮೂಡಿಸಿದ ಸನ್ನಿಧಿ ಕಶೆಕೋಡಿ, ಶಿರೂರು ಗುಡ್ಡ ಕುಸಿತ ಸಂದರ್ಭ ವೃದ್ಧೆಯ ಅಂತಿಮ ಸಂಸ್ಕಾರ ನೆರವೇರಿಸಿ ಮಾನವೀಯತೆಯನ್ನು ಸಾರಿದ ಪತ್ರಕರ್ತರನ್ನು ಸನ್ಮಾನಿಸಲಾಯಿತು.ಬಿಜೈ ಅಂಗನವಾಡಿಗೆ ಎರಡು ಫ್ಯಾನ್ ಗಳನ್ನು ಹಸ್ತಾಂತರಿಸಲಾಯಿತು.
ಎಸ್ಎಸ್ಎಲ್ಸಿ, ಪಿಯುಸಿಯ ಪ್ರತಿಭಾವಂತ ವಿದ್ಯಾರ್ಥಿಗಳನ್ನು ಪುರಸ್ಕರಿಸಲಾಯಿತು.
ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶ್ರೀನಿವಾಸ್ ನಾಯಕ್ ಇಂದಾಜೆ ಅಧ್ಯಕ್ಷತೆ ವಹಿಸಿದ್ದರು. ಜಿಲ್ಲಾ ವಾರ್ತಾಧಿಕಾರಿ ಖಾದರ್ ಷಾ, ಹಿರಿಯ ಪತ್ರಕರ್ತ ಆನಂದ್ ಶೆಟ್ಟಿ, ರಾಜ್ಯ ಪತ್ರಕರ್ತರ ಸಂಘದ ಕಾರ್ಯ ಕಾರಿ ಸಮಿತಿ ಸದಸ್ಯ ಜಗನ್ನಾಥ ಶೆಟ್ಟಿ ಬಾಳ, ಇಬ್ರಾಹಿಂ ಅಡ್ಕಸ್ಥಳ, ಪ್ರೆಸ್ ಕ್ಲಬ್ ಅಧ್ಯಕ್ಷ ಪಿ.ಬಿ. ಹರೀಶ್ ರೈ, ದಕ್ಷಿಣ ಕನ್ನಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಉಪಾಧ್ಯಕ್ಷ ಭಾಸ್ಕರ ರೈ ಕಟ್ಟ,ಕೋಶಾಧಿಕಾರಿ ಪುಷ್ಪ ರಾಜ್ ಬಿ.ಎನ್ ,ಕಾರ್ಯಕಾರಿ ಸಮಿತಿ ಸದಸ್ಯ ರಾಜೇಶ್ ದಡ್ಡಂಗಡಿ,ರಾಜೇಶ್ ಶೆಟ್ಟಿ,ನಿಶಾಂತ್ ಶೆಟ್ಟಿ ಮೊದಲಾದ ವರು ಉಪಸ್ಥಿತರಿದ್ದರು.
ಜಿಲ್ಲಾ ಸಂಘದ ಪ್ರಧಾನ ಕಾರ್ಯದರ್ಶಿ ಜಿತೇಂದ್ರ ಕುಂದೇ ಶ್ವರ ವಂದಿಸಿದರು.ಹರೀಶ್ ಮೋಟುಕಾನ ಕಾರ್ಯಕ್ರಮ ನಿರೂಪಿಸಿದರು.