ಸುಳ್ಯ:ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ನೂತನ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಆಯ್ಕೆಯಾಗಿದ್ದಾರೆ.
ಡಿ.28ರಂದು ನಡೆದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಲೋಕೇಶ್ ಪೆರ್ಲಂಪಾಡಿ ಹಾಗೂ

ತೇಜೆಶ್ವರ ಕುಂಸಲ್ಪಾಡಿ, ದಯಾನಂದ ಕೊರತ್ತೋಡಿ, ಜಯಪ್ರಕಾಶ್ ಕುಕ್ಕೇಟ್ಟಿ, ಪದ್ಮನಾಭ ಮುಂಡೋಕಜೆ
ಪ್ರಧಾನ ಕಾರ್ಯದರ್ಶಿಯಾಗಿ ದಯಾನಂದ ಕೊರತ್ತೋಡಿ ಆಯ್ಕೆಯಾದರು. ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿ ಹುದ್ದೆಗೆ ಮಾತ್ರ ಚುನಾವಣೆ ನಡೆದಿತ್ತು.6 ಸ್ಥಾನಗಳಿಗೆ ಅವಿರೋಧ ಆಯ್ಕೆ ನಡೆದಿದೆ. ಉಪಾಧ್ಯಕ್ಷರಾಗಿ ತೇಜೇಶ್ವರ ಕುಂದಲ್ಪಾಡಿ, ಕಾರ್ಯದರ್ಶಿಯಾಗಿ ಪದ್ಮನಾಭ ಮುಂಡೋಕಜೆ, ಕೋಶಾಧಿಕಾರಿಯಾಗಿ ಜಯಪ್ರಕಾಶ್ ಕುಕ್ಕೇಟ್ಟಿ, ಕಾರ್ಯಕಾರಿ ಸಮಿತಿ ಸದಸ್ಯರಾಗಿ ಗಂಗಾಧರ ಮಟ್ಟಿ, ಗಂಗಾಧರ ಕಲ್ಲಪಳ್ಳಿ, ಶಿವಪ್ರಸಾದ್ ಕೇರ್ಪಳ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

















