ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದ ವಿದ್ಯಾರ್ಥಿಗಳಿಗೆ ಮೋಡೆಲ್ ಮೇಕಿಂಗ್ ಹಾಗೂ ರಸಪ್ರಶ್ನೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ವಿದ್ಯಾರ್ಥಿಗಳು ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದರು.ಮೋಡೆಲ್ ಮೇಕಿಂಗ್ ಸ್ಪರ್ಧೆಯಲ್ಲಿ
ವಿದ್ಯಾರ್ಥಿಗಳ ನವೀನ ಕಲ್ಪನೆಗಳು ಮೆಚ್ಚುಗೆಗೆ ಪಾತ್ರವಾದರೆ, ರಸಪ್ರಶ್ನೆ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳ ಬುದ್ಧಿಚಾತುರ್ಯ ಗಮನ ಸೆಳೆಯಿತು. ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಮತ್ತು ಟ್ರಸ್ಟಿ ಡಾ.ಜ್ಯೋತಿ ಆರ್ ಪ್ರಸಾದ್ ಹಾಗೂ ಡಾ.ಅಭಿಜ್ಞಾ ಆರ್ ಕುರುಂಜಿ ಕಾಲೇಜಿನ ಸಿಇಓ ಡಾ. ಉಜ್ವಲ್ ಯುಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಹಾಗೂ ಟ್ರಸ್ಟಿ ಶಮೌರ್ಯ ಆರ್ ರವರು ವಿಜೇತ ವಿದ್ಯಾರ್ಥಿಗಳಿಗೆ ಬಹುಮಾನ ವಿತರಿಸಿ ಮಾತನಾಡಿ ವಿದ್ಯಾರ್ಥಿಗಳು ಚಿಂತನೆ, ಆತ್ಮವಿಶ್ವಾಸದ ಮನೋಭಾವವನ್ನು ಬೆಳೆಸಿಕೊಳ್ಳಬೇಕು ಎಂದರು.
ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಯಶೋದ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.





