ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಓರಿಯೆಂಟೇಷನ್ ಕಾರ್ಯಕ್ರಮ ಸುಳ್ಯದ ಅಮರಶ್ರೀ ಭಾಗ್ನ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ಕಾರ್ಯಕ್ರಮವನ್ನು ಎ.ಒ.ಎಲ್.ಇ ಕಮಿಟಿ ಬಿ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್ ಉದ್ಘಾಟಿಸಿ ಮಾತನಾಡಿ ಕೆವಿಜಿ ಅಮರಜ್ಯೋತಿ ಪಿಯು ಕಾಲೇಜಿನಲ್ಲಿ ಶಿಕ್ಷಣದ ಗುಣಮಟ್ಟವನ್ನು
ಕಾಪಾಡುವಲ್ಲಿ ಆಡಳಿತ ಮಂಡಳಿ ವತಿಯಿಂದ ಎಲ್ಲಾ ಸೌಕರ್ಯಗಳನ್ನು ಕಲ್ಪಿಸಲಾಗಿದೆ. ಉತ್ತಮ ಶಿಕ್ಷಕರ ತಂಡ ಇದೆ. ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಸೂಕ್ತ ಮಾರ್ಗದರ್ಶನ ನೀಡುತ್ತಿದ್ದೇವೆ. ವಿದ್ಯಾರ್ಥಿಗಳು ಇದರ ಸದುಪಯೋಗ ಪಡೆದುಕೊಂಡು ಉತ್ತಮ ಅಂಕಗಳನ್ನು ಪಡೆದು ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿದ್ದ ಕೆವಿಜಿ ಡೆಂಟಲ್ ಕಾಲೇಜಿನ ಎಕ್ಸಿಕ್ಯುಟಿವ್ ಡೈರೆಕ್ಟರ್ ಹಾಗೂ ಕೆವಿಜಿ ಚಾರಿಟೇಬಲ್ ಟ್ರಸ್ಟ್ನ ಟ್ರಸ್ಟಿ ಮೌರ್ಯ ಆರ್. ಕುರುಂಜಿ ಮಾತನಾಡಿ.ವಿದ್ಯಾರ್ಥಿ ಜೀವನ ಎಂಬುದು ಬದುಕಿನ ಪ್ರಮುಖ ಘಟ್ಟ ಈ ಸಮಯ ತುಂಬಾ ಪ್ರಾಮುಖ್ಯವಾದದ್ದು. ವಿದ್ಯಾರ್ಥಿಗಳು ಸಿಕ್ಕಿದ ಅವಕಾಶವನ್ನು ಸರಿಯಾಗಿ ಬಳಕೆ ಮಾಡಿ ಉನ್ನತ ಸ್ಥಾನಕ್ಕೆ ಏರಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಕಾಲೇಜಿನ ಪ್ರಾಂಶುಪಾಲೆ ಡಾ.ಯಶೋಧ ರಾಮಚಂದ್ರ ಮಾತನಾಡಿ ಪೋಷಕರು ತಮ್ಮ ಮಕ್ಕಳ ಬಗ್ಗೆ ನಿರೀಕ್ಷೆಗಳನ್ನು ಇಟ್ಟುಕೊಂಡು ನಮ್ಮ ಸಂಸ್ಥೆಗೆ ಸೇರಿಸಿದ್ದೀರಿ. ನಿಮ್ಮ ನಿರೀಕ್ಷೆಗಳನ್ನು ನಾವು ಈಡೇರಿಸುತ್ತೇವೆ, ಅತ್ಯುತ್ತಮ ಶಿಕ್ಷಣ ಪಡೆಯುವ ಮೂಲಕ ಉತ್ತಮ ವ್ಯಕ್ತಿಗಳಾಗಿ ಬೆಳೆಯಲಿದ್ದಾರೆ ಎಂದರು. ಸಂಸ್ಥೆಯ ಅಧ್ಯಕ್ಷ ಡಾ.ರೇಣುಕಾ ಪ್ರಸಾದ್ ಕೆ.ವಿ, ಟ್ರಸ್ಟಿಗಳಾದ ಡಾ. ಜ್ಯೋತಿ ಆರ್ ಪ್ರಸಾದ್, ಮೌರ್ಯ ಆರ್. ಕುರುಂಜಿ, ಸಂಸ್ಥೆಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ, ಅವರ ಮಾರ್ಗದರ್ಶನದಲ್ಲಿ ಸಂಸ್ಥೆ ಉತ್ತಮವಾಗಿ ನಡೆಯುತ್ತಿದೆ ಎಂದು ಅವರು ಹೇಳಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ದೀಪಕ್ ವೈ.ಆರ್ ಸ್ವಾಗತಿಸಿ, ಕಾಲೇಜಿನ ನೀತಿ ನಿಯಮಗಳ ಬಗ್ಗೆ ಮಾಹಿತಿ ನೀಡಿದರು. ಸಿಇಟಿ, ನೀಟ್, ಜೆಇಇ ಪೂರ್ವ ತಯಾರಿಯ ಬಗ್ಗೆ ವಿಜ್ಞಾನ ವಿಭಾಗದ ಉಪನ್ಯಾಸಕಿ ಭವ್ಯ ಸಿ.ಟಿ ಮಾಹಿತಿ ನೀಡಿದರೆ, ವಾಣಿಜ್ಯ ವಿಷಯಗಳಿಗೆ ಸಂಬಂಧಿಸಿದ ಮಾಹಿತಿಯನ್ನು ವಾಣಿಜ್ಯ ವಿಭಾಗದ ಉಪನ್ಯಾಸಕರಾದ ದೀಕ್ಷಿತ್ ಎಂ.ಕೆ ನೀಡಿದರು. ಉಪನ್ಯಾಸಕಿ ಅರ್ಪಿತಾ ಸಾಧಕ ವಿದ್ಯಾರ್ಥಿಗಳ ಹೆಸರು ವಾಚಿಸಿದರು. ಸಾಧಕ ವಿದ್ಯಾರ್ಥಿಗಳನ್ನು ವೇದಿಕೆಯಲ್ಲಿದ್ದ ಗಣ್ಯರು ಸನ್ಮಾನಿಸಿದರು.
ವಿದ್ಯಾರ್ಥಿಗಳಾದ ಮೊಹಮ್ಮದ್ ಲಾಝಿಮ್, ಪ್ರೇಕ್ಷಾ ಬಿ.ಸಿ, ಅರ್ಚನಾ ಜಯನ್, ಪೃಥ್ವಿ ಎಂ, ಕೀರ್ತನ್ ಸಿ.ವಿ, ಮರಿಯಮ್ ಶಿಭಾ ಅಭಿಪ್ರಾಯ ವ್ಯಕ್ತಪಡಿಸಿದರು.ಆಂಗ್ಲ ಭಾಷಾ ಉಪನ್ಯಾಸಕಿ ಮಲ್ಲಿಕಾ ಎಂ.ಎಲ್ ಕಾರ್ಯಕ್ರಮ ನಿರೂಪಿಸಿದರು. ದ್ವಿತೀಯ ಪಿಯುಸಿ ವಿದ್ಯಾರ್ಥಿನಿಯರು ಪ್ರಾರ್ಥಿಸಿದರು. ಹಿಂದಿ ಉಪನ್ಯಾಸಕಿ ಸುಶ್ಮಿತಾ ಜಾಕೆ ವಂದಿಸಿದರು.ವಿದ್ಯಾರ್ಥಿನಿಯರು ಸ್ವಾಗತ ನೃತ್ಯ ಮಾಡಿದರು.