ಸುಳ್ಯ:ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿನಲ್ಲಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಸುಳ್ಯ, ಜನಜಾಗೃತಿ ವೇದಿಕೆ ಸುಳ್ಯ ಹಾಗೂ ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಸುಳ್ಯ ವಲಯದ ಸಹಯೋಗದಲ್ಲಿ ಅಂತರರಾಷ್ಟ್ರೀಯ ಮಾದಕವಸ್ತು ವಿರೋಧಿ ದಿನಾಚರಣೆ ಅಂಗವಾಗಿ
ಸ್ವಾಸ್ಥ್ಯ ಸಂಕಲ್ಪ ಅನ್ಲೈನ್ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಮಾದಕವಸ್ತುಗಳ ದುಷ್ಪರಿಣಾಮಗಳ ಕುರಿತು ಯುವಜನರಲ್ಲಿ ಅರಿವು ಮೂಡಿಸುವ ಉದ್ದೇಶದಿಂದ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮವು ವಿದ್ಯಾರ್ಥಿನಿ ಸೊಹನಿ ಅವರ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಕಾಲೇಜಿನ ಉಪಪ್ರಾಂಶುಪಾಲ ದೀಪಕ್ ವೈ ಆರ್ ಸ್ವಾಗತಿಸಿದರು. ಬಳಿಕ ವೇದಿಕೆಯಲ್ಲಿದ್ದ ಗಣ್ಯರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು.
ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಸುಳ್ಯ ಇದರ ಯೋಜನಾಧಿಕಾರಿ ಮಾಧವ ಗೌಡ ಕಾರ್ಯಕ್ರಮದ ಕುರಿತು ಮಾತನಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜನಜಾಗೃತಿ ವೇದಿಕೆಯ ಅಧ್ಯಕ್ಷ ಎಂ. ವೆಂಕಪ್ಪ ಗೌಡ ವಹಿಸಿದ್ದರು.
ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧಾ ರಾಮಚಂದ್ರ, ಸುರೇಶ್ ಕಣೆಮರಡ್ಕ, ಲೋಕನಾಥ ಅಮೆಚೂರು, ವಿಜಯಕುಮಾರ್ ಉಬರಡ್ಕ, ಬೂಡು ರಾಧಾಕೃಷ್ಣ ರೈ, ಜಿನ್ನಪ್ಪ ಪೂಜಾರಿ,ದಿನೇಶ್, ಸೌಜನ್ಯ ಉಪಸ್ಥಿತರಿದ್ದರು. ಮಾದಕವಸ್ತು ಸೇವನೆಯ ಅಪಾಯಗಳು, ಕಾನೂನು ಕ್ರಮಗಳು ಮತ್ತು ಯುವಜನರ ಜವಾಬ್ದಾರಿಗಳ ಕುರಿತ ಗಣ್ಯರ ಸಂದೇಶವನ್ನು ಆನ್ಲೈನ್ ಮೂಲಕ ನೀಡಲಾಯಿತು.ಉಪನ್ಯಾಸಕಿ ಮಲ್ಲಿಕಾ ಎಂ.ಎಲ್. ಕಾರ್ಯಕ್ರಮ ನಿರೂಪಿಸಿದರು.






