ಸುಳ್ಯ: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟಗೊಂಡಿದ್ದು ಕೆವಿಜಿ ಅಮರಜ್ಯೋತಿ ಪದವಿ ಪೂರ್ವ ಕಾಲೇಜಿಗೆ ಅತ್ಯುತ್ತಮ ಫಲಿತಾಂಶ ಲಭಿಸಿದೆ. ಪರೀಕ್ಷೆ ಬರೆದ 78 ವಿದ್ಯಾರ್ಥಿಗಳು ಅತ್ಯುನ್ನತ ಶ್ರೇಣಿಯಲ್ಲಿ,51 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆ.ವಿಜ್ಞಾನ ವಿಭಾಗದಲ್ಲಿ
ಸಂಜನ ರಾವ್, ಬೃಂದಾ ಸುರೇಶ್, ಪ್ರಥಮ್ ಶೇಖರ್,ರೌಧಾ ಅಶ್ರಫ್
ಬೃಂದಾ ಸುರೇಶ್ 589 ಅಂಕ ಪಡೆದು ರಾಜ್ಯಕ್ಕೆ 10ನೇ ರ್ಯಾಂಕ್ ಹಾಗೂ ಪ್ರಥಮ್ ಶೇಖರ್ 588 ಅಂಕ ಪಡೆದಿದ್ದಾರೆ. ವಾಣಿಜ್ಯ ವಿಭಾಗದಲ್ಲಿ ಸಂಜನಾ ರಾವ್ ಎಚ್ 591 ರಾಜ್ಯಕ್ಕೆ 7ನೇ ರ್ಯಾಂಕ್ ಪಡೆದು ರೌಧ ಅಶ್ರಫ್ 581 ಅಂಕ ಗಳಿಸಿರುತ್ತಾರೆ.ಇವರಿಗೆ ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ, ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್ ಹಾಗೂ ಎಲ್ಲಾ ಭೋದಕ ಭೋದಕೇತರ ಸಿಬ್ಬಂದಿಗಳು ಅಭಿನಂದಿಸಿದ್ದಾರೆ.