ಸುಳ್ಯ:ಕೆವಿಜಿ ಅಮರಜ್ಯೋತಿಯಲ್ಲಿ ಪದವಿಪೂರ್ವ ಕಾಲೇಜಿನಲ್ಲಿ ಜುಲೈ 31ರಂದು ಅಧ್ಯಾಪಕರ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮವನ್ನು ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಅವರು ಆಯೋಜಿಸಿದ್ದರು.
ಕಾರ್ಯಕ್ರಮದಲ್ಲಿ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ್ ವಿ ಅವರು ತಂತ್ರಜ್ಞಾನದ ಬಗ್ಗೆ ಹಾಗೂ ವಿವಿಧ ಹಾಗೂ ಅಧುನಿಕ ಜಗತ್ತಿನಲ್ಲಿ ಸ್ಪರ್ಧಾತ್ಮಕದ ಪಾತ್ರದ ಬಗ್ಗೆ
ವಿವರಿಸಿದರು. ಇಂಜಿನಿಯರಿಂಗ್ ಕಾಲೇಜಿನ ಮೆಕ್ಯಾನಿಕ್ ವಿಭಾಗದ ಪ್ರೊಫೆಸರ್ ಅಭಿಜ್ಞಾ ಬಿ ಬಿ ಅವರು ಪೈತಾನ್ ಪ್ರೋಗ್ರಾಮಿಂಗ್ ಲ್ಯಾಂಗ್ವೇಜ್
ಬಗ್ಗೆ ಪ್ರಾಯೋಗಿಕವಾಗಿ ವಿವರಿಸಿದರು.ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ 6ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ಉಲ್ಲಾಸ್ ಮತ್ತು ರಕ್ಷಿತ್ ಸಹಕರಿಸಿದರು. ಕೆವಿಜಿ ಐಪಿಎಸ್ ನ ಶೈಕ್ಷಣಿಕ ಸಂಯೋಜನಾಧಿಕಾರಿ ರೇಣುಕಾ ಉತ್ತಪ್ಪ ಕಾರ್ಯಕ್ರಮ ನಿರೂಪಿಸಿದರು.ಕಾಲೇಜಿನ ಮ್ಯಾನೇಜಿಂಗ್ ಟ್ರಸ್ಟ್ ಡಾ. ರೇಣುಕಾ ಪ್ರಸಾದ್ ಕೆ ವಿ,ಟ್ರಸ್ಟಿ ಡಾ. ಜ್ಯೋತಿ ಆರ್ ಪ್ರಸಾದ್ ಹಾಗೂ ಕಾಲೇಜಿನ ಸಿಇಒ ಡಾ. ಉಜ್ವಲ್ ಯು ಜೆ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು. ಕೆವಿಜಿ ಐಪಿಎಸ್ ನ ಪ್ರಾಂಶುಪಾಲರಾದ ಅರುಣ್ ಕುಮಾರ್ ಸ್ವಾಗತಿಸಿ ಉಪನ್ಯಾಸಕಿ ಭವ್ಯ ವಂದಿಸಿದರು.ಕಾಲೇಜಿನ ಪ್ರಾಂಶುಪಾಲರಾದ ಡಾ. ಯಶೋದಾ ರಾಮಚಂದ್ರ, ಕಾಲೇಜಿನ ಉಪ ಪ್ರಾಂಶುಪಾಲರಾದ ದೀಪಕ್ ವೈ ಆರ್, ಹಾಗೂ ಉಪ ಪ್ರಾಂಶುಪಾಲರಾದ ಶಿಲ್ಪಾ ಬಿದ್ದಪ್ಪ ಹಾಗೂ ಎಲ್ಲಾ ಉಪನ್ಯಾಸಕರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.