ಸುಳ್ಯ: ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ವಾರ್ಷಿಕೋತ್ಸವ’ ‘ಎಜೆ ಫಿಯೆಸ್ಟಾ 2023’ ಅಮರಶ್ರೀಭಾಗ್ನ ಕುರುಂಜಿ ಜಾನಕಿ ವೆಂಕಟ್ರಮಣ ಗೌಡ
ಸಭಾಭವನದಲ್ಲಿ ನಡೆಯಿತು. ಮುಖ್ಯ ಅತಿಥಿಯಾಗಿದ್ದ ಸುಳ್ಯ ಸೈಂಟ್ ಜೋಸೆಫ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ಫಾ.ವಿಕ್ಟರ್ ಡಿ’ಸೋಜ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಮುಖ್ಯ ಅತಿಥಿಯಾಗಿದ್ದರು. ಕಾಲೇಜಿನ
ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಉಪನ್ಯಾಸಕಿ ಕವಿತಾ ಎಂ.ಕೆ ಸಂಸ್ಥೆಯ ಬಗ್ಗೆ ಮಾಹಿತಿ ನೀಡಿದರು. ಕಾಲೇಜಿನ ಪ್ರಾಂಶುಪಾಲರಲೆ ಡಾ. ಯಶೋಧ ರಾಮಚಂದ್ರ ವಾರ್ಷಿಕ ವರದಿ ವಾಚಿಸಿದರು. ಉಪನ್ಯಾಸಕಿ ಅಭಿಜ್ಞ ಅತಿಥಿಯನ್ನು ಪರಿಚಯಿಸಿದರು.
ಫಾ. ವಿಕ್ಟರ್ ಡಿ’ಸೋಜ ಅವರನ್ನು ಈ ಸಂದರ್ಭದಲ್ಲಿ ಸನ್ಮಾನಿಸಲಾಯಿತು. ಕಾಲೇಜಿನ ಉಪಪ್ರಾಂಶುಪಾಲ ದೀಪಕ್ ವೈ.ಆರ್ ಸ್ವಾಗತಿಸಿದರು. ಉಪನ್ಯಾಸಕಿ ಮಲ್ಲಿಕಾ ಎಂ.ಎಲ್, ವಿದ್ಯಾರ್ಥಿಗಳಾದ ಪ್ರಥಮ್ ಶೇಖರ್, ಪ್ರತಿಜ್ಞಾ ಬಿ.ಎಂ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳ ಪೋಷಕರು, ವಿವಿಧ ವಿದ್ಯಾಸಂಸ್ಥೆಗಳ ಮುಖ್ಯಸ್ಥ, ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.
ಸಭಾ ಕಾರ್ಯಕ್ರಮದ ಬಳಿಕ ಸಂಸ್ಥೆಯ ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.









