ಸುಳ್ಯ: ಸುಳ್ಯದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕೆವಿಜಿ ಅಮರಜ್ಯೋತಿ ಪದವಿಪೂರ್ವ ಕಾಲೇಜಿನ ವತಿಯಿಂದ ಡಾ.ಕುರುಂಜಿ ವೆಂಕಟ್ರಮಣ ಗೌಡರ ಹುಟ್ಟುಹಬ್ಬ ದಿನವಾದ ಡಿ.26ರಂದು ಮ್ಯಾರಥಾನ್ ಓಟ ಹಮ್ಮಿಕೊಳ್ಳಲಾಗಿದೆ. ‘ಆರೋಗ್ಯವಂತ ಜೀವನಕ್ಕಾಗಿ ಓಟ’ ಎಂಬ
ಸಂದೇಶ ಸಾರಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ಡಿ.26ರಂದು ಪೂ.6 ಗಂಟೆಗೆ ಕಾಲೇಜಿನ ಪರಿಸರದಿಂದ ಮ್ಯಾರಥಾನ್ ಆರಂಭವಾಗಲಿದೆ. 5 ಕಿಲೋಮೀಟರ್ ಮತ್ತು 10 ಕಿಲೋ ಮೀಟರ್ ಎಂಬ ಎರಡು ವಿಭಾಗದಲ್ಲಿ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. 18 ವರ್ಷದ

ಕೆಳಗಿನವರಿಗಾಗಿ 5 ಕಿಲೋಮೀಟರ್ ಹಾಗೂ 18 ವರ್ಷ ಮೇಲ್ಪಟ್ಟವರಿಗಾಗಿ 10 ಕಿಲೋಮೀಟರ್ ಮ್ಯಾರಥಾನ್ ಹಮ್ಮಿಕೊಳ್ಳಲಾಗಿದೆ. ವಿದ್ಯಾರ್ಥಿಗಳು, ಸಾರ್ವಜನಿಕರು ಮ್ಯಾರಥಾನ್ನಲ್ಲಿ ಭಾಗವಹಿಸಬಹುದು. ನೋಂದಣಿ ಹಾಗೂ ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು. 8050024770,
9900898487





