ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ 2024 -25 ನೇ ಸಾಲಿನ ಪ್ರಥಮ ಬಿಎಎಂಎಸ್ ವಿದ್ಯಾರ್ಥಿಗಳಿಗೆ ಶಿಶ್ಯೋಪನಯನ ಹಾಗೂ ಗಣಪತಿ ಹವನ ಸಹಿತ ಧನ್ವಂತರಿ ಪೂಜೆಯನ್ನು ಕಾಲೇಜಿನಲ್ಲಿ ನಡೆಯಿತು. ವೇದಮೂರ್ತಿ ಪುರೋಹಿತ ನಾಗರಾಜ್ ಭಟ್ ಹಾಗೂ
ನಟರಾಜ್ ಶರ್ಮಾ ರವರ ವೈದಿಕತ್ವದಲ್ಲಿ ಪೂಜೆ ನಡೆಯಿತು. ಸಮಾರಂಭದಲ್ಲಿ ಅಕಾಡೆಮಿ ಆಫ್ ಲಿಬರಲ್ ಎಜುಕೇಶನ್ನ ಅಧ್ಯಕ್ಷ ಡಾ. ಚಿದಾನಂದ ಕೆ ವಿ, ಉಪಾಧ್ಯಕ್ಷೆ ಶೋಭಾ ಚಿದಾನಂದ, ಎಒಎಲ್ಇ ಕೌಂನ್ಸಿಲ್ ಮೆಂಬರ್. ಜಗದೀಶ್ ಅಡ್ತಲೆ, ಎಡವೈಸರ್ ದಾಮೋದರ ಗೌಡ, ಅಧ್ಯಕ್ಷರ ಆಪ್ತ ಕಾರ್ಯದರ್ಶಿ ಚಂದ್ರಶೇಖರ್ ಪೇರಾಲ್, ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ.ವಿ., ವಿದ್ಯಾರ್ಥಿ ಕ್ಷೇಮಾಭಿವೃದ್ಧಿ ಅಧಿಕಾರಿ ಡಾ. ಹರ್ಷಿತಾ ಎಂ., ಕಾಲೇಜಿನ ಬೋಧಕ – ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರು ಗಳು, ವಿದ್ಯಾರ್ಥಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.