ಸುಳ್ಯ ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿ ಮತ್ತು ಆಸ್ಪತ್ರೆ ಸುಳ್ಯ ಹಾಗೂ ಆಯುಷ್ ಇಲಾಖೆ ದಕ್ಷಿಣ ಕನ್ನಡ ಜಿಲ್ಲೆ ಇದರ ಸಹಯೋಗದೊಂದಿಗೆ ಕಾಲೇಜಿನ ಆಡಿಟೋರಿಯಂನಲ್ಲಿ 45 ವರ್ಷ ಮೇಲ್ಪಟ್ಟ ಮಹಿಳೆಯರ ಯೋಗಕ್ಷೇಮದಲ್ಲಿ ಆಯುರ್ವೇದದ ಪಾತ್ರ ಎಂಬ ವಿಷಯದ ಬಗ್ಗೆ ಮಾಹಿತಿ ಕಾರ್ಯಗಾರ ನಡೆಯಿತು. ಮಾಹಿತಿ ಕಾರ್ಯಗಾರವನ್ನು
ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಪ್ರಸೂತಿ ತಂತ್ರ ಹಾಗೂ ಸ್ತ್ರೀರೋಗ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಅಶೋಕ್ ಕೆ ನಡೆಸಿಕೊಟ್ಟರು.ಈ ಕಾರ್ಯಗಾರದಲ್ಲಿ ಕೆವಿಜಿ ಕಾನೂನು ಮಹಾವಿದ್ಯಾಲಯ ಸುಳ್ಯ, ನೆಹರು ಮೆಮೋರಿಯಲ್ ಕಾಲೇಜ್ ಸುಳ್ಯ ಇದರ ಸಿಬ್ಬಂದಿ ವರ್ಗದವರು, ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ಎನ್ಎಸ್ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ ಎ, ಕಾಲೇಜಿನ ಬೋಧಕ ಬೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತರ ವಿದ್ಯಾರ್ಥಿಗಳು, ಕಲಿಕಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜಿನ ವಿದ್ಯಾರ್ಥಿಗಳಾದ ಕುಮಾರಿ ಚಿತ್ಕಲ ಭಾರದ್ವಾಜ್ ಹಾಗೂ ಕುಮಾರಿ ಅಶ್ವಿನಿ ಪ್ರಾರ್ಥಿಸಿದರು. ಎಸ್ ಅಶ್ವಿನಿ ಹಾಗೂ ಕುಮಾರಿ ಲಕ್ಷ್ಮಿ ಸ್ವಾಗತಿಸಿ ನಿರೂಪಿಸಿ ವಂದಿಸಿದರು.