ಸುಳ್ಯ:ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ, ಹಾಗೂ ಈಶ ಯೋಗ ಕೇಂದ್ರ ಮಂಗಳೂರು ಇದರ ಸಹಯೋಗದೊಂದಿಗೆ ಅಂತರಾಷ್ಟ್ರೀಯ ಯೋಗ ದಿನಾಚರಣೆಯ ಅಂಗವಾಗಿ ಯೋಗ ತರಬೇತಿ ಕಾರ್ಯಗಾರವನ್ನು ಹಮ್ಮಿಕೊಳ್ಳಲಾಯಿತು. ಕಾರ್ಯಕ್ರಮದಲ್ಲಿ
ದ್ವಿತೀಯ ವರ್ಷದ ಬಿ.ಎ.ಎಂ.ಎಸ್ ವಿದ್ಯಾರ್ಥಿಗಳಿಗೆ ಈಶ ಯೋಗಕೇಂದ್ರ ಮಂಗಳೂರಿನ ಸೃಷ್ಠಿ ಎಸ್. ಶೆಟ್ಟಿ ಯೋಗ ಪ್ರಾತ್ಯಕ್ಷಿಕೆಯೊಂದಿಗೆ, ಯೋಗದ ಮಹತ್ವವನ್ನು ತಿಳಿಸಿ ಕಾರ್ಯಗಾರ ನಡೆಸಿಕೊಟ್ಟರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ದ್ರವ್ಯಗುಣ ವಿಭಾಗದ ಪ್ರಾಧ್ಯಾಪಕರಾದ ಡಾ. ಕವಿತಾ ಬಿ. ಎಂ., ಸಂಸ್ಥೆಯ ಪಂಚಕರ್ಮ ವಿಭಾಗ ಮುಖ್ಯಸ್ಥರಾದ ಡಾ. ಸನತ್ ಕುಮಾರ್ ಡಿ. ಜಿ., ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜಯವಾಣಿ ಯಂ. ಜಿ., ಡಾ. ಶಭೀನಾ ಟಿ. ಟಿ. ಹಾಗೂ ಡಾ. ಐಶ್ವರ್ಯ ಬಾಲಗೋಪಾಲ್. ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಈ ಕಾರ್ಯಕ್ರಮವನ್ನು ಯಶಸ್ವಿನಿ ನಿರೂಪಿಸಿದರು.