ಮರ್ಕಂಜ: ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯ ಇದರ ರಾಷ್ಟ್ರೀಯ ಸೇವಾ ಯೋಜನಾ ಘಟಕದ ವತಿಯಿಂದ ಒಂದು ವಾರ ನಡೆಯಲಿರುವ ವಾರ್ಷಿಕ ವಿಶೇಷ ಶಿಬಿರದ ಉದ್ಘಾಟನಾ ಕಾರ್ಯಕ್ರಮ ನ.6ರಂದು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ಮರ್ಕಂಜ- ರೆಂಜಾಳದ ಶ್ರೀ. ವಿನಾಯಕ ಸಭಾಭವನದಲ್ಲಿ ನಡೆಯಿತು. ಶಿಬಿರದ ಮೊದಲನೇ ದಿನದ ಧ್ವಜಾರೋಹಣವನ್ನು
ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ನೆರವೇರಿಸಿದರು. ಶಿಬಿರದ ಉದ್ಘಾಟನೆಯನ್ನು ಶ್ರೀ ಶಾಸ್ತಾವು ಸದಾಶಿವ ಮಹಾಗಣಪತಿ ದೇವಸ್ಥಾನ ರೆಂಜಾಳದ ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ನೆರವೇರಿಸಿ ಶುಭ ಹಾರೈಸಿದರು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಡಾ. ಲೀಲಾಧರ ಡಿ ವಿ ವಹಿಸಿದ್ದರು. ವೇದಿಕೆಯಲ್ಲಿ ಮರ್ಕಂಜ ಗ್ರಾಮ ಪಂಚಾಯತ್ ಮರ್ಕಂಜ ಅಧ್ಯಕ್ಷ ರಾದ ಗೀತಾ ಹೊಸೊಳಿಕೆ, ಪುಟ್ಟಣ್ಣ ಗೌಡ ಬಾಣೂರು ಅಧ್ಯಕ್ಷರು ಸೇವಾ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಜಗನ್ಮೋಹನ್ ರೈ ಹೈದಂಗೂರು ಉಪಾಧ್ಯಕ್ಷರು ಸೇವಾ
ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ರಾಜೇಶ್ವರಿ ಕುಮಾರಸ್ವಾಮಿ ನಿಕಟಪೂರ್ವ ಸದಸ್ಯರು ವ್ಯವಸ್ಥಾಪನ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಚಿನ್ನಪ್ಪ ಗೌಡ ಬೇರಿಕೆ ಅಧ್ಯಕ್ಷರು ಅನ್ನಪೂರ್ಣ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ದಾಮೋದರ ಪಾಟಾಳಿ ಸಂಚಾಲಕರು ಅನ್ನಪೂರ್ಣ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಕುಮಾರಸ್ವಾಮಿ ನಿಕಟಪೂರ್ವ ಅಧ್ಯಕ್ಷರು ಸೇವಾ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ಮಹಾಬಲ ಕಟ್ಟಕೋಡಿ ಸಂಚಾಲಕರು ಜೀರ್ಣೋದ್ಧಾರ ಸಮಿತಿ ಶ್ರೀ ಕ್ಷೇತ್ರ ರೆಂಜಾಳ, ವಿಧ್ಯಾರ್ಥಿ ಕ್ಷೇಮಾಭಿವದ್ಧಿ ಅಧಿಕಾರಿ ಡಾ. ಹರ್ಷಿತಾ ಪುರುಷೋತ್ತಮ್, ರಾಷ್ಟ್ರೀಯ ಸೇವಾ ಯೋಜನಾ ಶಿಬಿರದ ಯೋಜನಾಧಿಕಾರಿಯಾದ ಡಾ. ಪ್ರಮೋದ ಪಿ ಎ, ವಿಧ್ಯಾರ್ಥಿ ಸಂಘದ ಅಧ್ಯಕ್ಷರಾದ ಶ್ರೀ ಆರ್ಥಿಕ್ ಕೆ ಎಸ್, ಎನ್ ಎಸ್ ಎಸ್ ಘಟಕದ ನಾಯಕರುಗಳಾದ ಕುಮಾರಿ ಚೇತನ ಎಂ ಹಾಗೂ ವಿಶ್ವಾಸ್ ಗೌಡ ವೇದಿಕೆಯಲ್ಲಿ ಇದ್ದರು. ಶಿಭಿರಾರ್ಥಿಗಳಾದ ಕ ಮೀನಾಕ್ಷಿ ಮತ್ತು ಕಾವ್ಯ ಇವರು ಪ್ರಾರ್ಥಿಸಿ, ಮೇಘನಾ ಸ್ವಾಗತಿಸಿ, ಅಮೂಲ್ಯ ಶ್ರೀ ವಂದಿಸಿದರು. ಚಿಂತನ ಹಾಗೂ ಶ್ರಾವ್ಯ ಇವರು ಕಾರ್ಯಕ್ರಮವನ್ನು ನಿರೂಪಿಸಿದರು. ಶಿಬಿರ ನ.6ರಿಂದ 12ರ ತನಕ ನಡೆಯಲಿದೆ. ಈ ಶಿಬಿರದಲ್ಲಿ ಗ್ರಾಮದ ವಿವಿಧ ಶಾಲೆಗಳಲ್ಲಿ ಉಚಿತ ಆರೋಗ್ಯ ತಪಾಸಣೆ ಹಾಗೂ ಚಿಕಿತ್ಸಾ ಶಿಬಿರ, ಆರೋಗ್ಯ ಸಮೀಕ್ಷೆಯನ್ನು ನಡೆಸಲಾಗುವುದು.