ಸುಳ್ಯ: ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯ ಕರ್ನಾಟಕ ಬೆಂಗಳೂರು ಮಾರ್ಚ್ 2025ರಲ್ಲಿ ನಡೆಸಿದ ಅಂತಿಮ ವರ್ಷದ ಸ್ನಾತಕೋತರ ವಿದ್ಯಾರ್ಥಿಗಳ ಪರೀಕ್ಷಾ ಫಲಿತಾಂಶ ಪ್ರಕಟವಾಗಿದ್ದು ಕೆವಿಜಿ ಆಯುರ್ವೇದ ವೈದ್ಯಕೀಯ ಕಾಲೇಜಿಗೆ

ಡಾ. ಪ್ರಿಯ ಪಿ. ಹಾಗೂ ಡಾ. ಧನ್ಯಶ್ರೀ ಯು. ಬಿ.
ಶೇ.100 ಫಲಿತಾಂಶ ದಾಖಲಾಗಿದೆ. 2 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ, 15 ವಿದ್ಯಾರ್ಥಿಗಳು ಪ್ರಥಮ ದರ್ಜೆಯಲ್ಲಿ 1 ವಿದ್ಯಾರ್ಥಿ ದ್ವಿತೀಯ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ. ಅಂತಿಮ ವರ್ಷದ ಸ್ನಾತಕೋತ್ತರ ವಿಭಾಗದಲ್ಲಿ 18 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಡಾ. ಧನ್ಯಶ್ರೀ ಯು. ಬಿ. ಹಾಗೂ ಡಾ. ಪ್ರಿಯ ಪಿ. ವಿಶಿಷ್ಟ ಶ್ರೇಣಿಯಲ್ಲಿ ಉತ್ತಿರ್ಣರಾಗಿದ್ದಾರೆ ಎಂದು ಕಾಲೇಜಿನ ಪ್ರಕಟಣೆ ತಿಳಿಸಿದೆ.