ಸುಳ್ಯ:ಕೆವಿಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆ ಸುಳ್ಯದಲ್ಲಿ ಆ.13 ರಂದು ಆಚರಿಸಲಾಗುವ ವಿಶ್ವ ಅಂಗದಾನ ದಿನಾಚರಣೆಯ ಅಂಗವಾಗಿ ಕಾಲೇಜಿನ ರಚನಾ ಶಾರೀರ ವಿಭಾಗ, ಕ್ರಿಯಾ ಶಾರೀರ ವಿಭಾಗದ ವತಿಯಿಂದ ಅಂಗದಾನದ ಕುರಿತು ಜಾಗೃತಿ ಮೂಡಿಸುವ ಸಲುವಾಗಿ ಅತಿಥಿ ಉಪನ್ಯಾಸವನ್ನು ಆಯೋಜಿಸಲಾಯಿತು. ಕಾರ್ಯಕ್ರಮವನ್ನು
ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ ಉದ್ಘಾಟಿಸಿದರು. ಪ್ರಸೂತಿ ತಂತ್ರ ಹಾಗೂ ಸ್ತ್ರೀ ರೋಗ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಡಾ. ಅಶೋಕ್ ಕೆ. ಅಂಗಾದಾನ ಕುರಿತು ಪ್ರಾತ್ಯಕ್ಷಿಕೆ ನೀಡಿದರು. ಮೇಧ, ಮಾಯಾ ಹಾಗೂ ಶ್ರಾವಣಿ ಪ್ರಾರ್ಥಿಸಿದರು.
ರಚನಾ ಶಾರೀರ ವಿಭಾಗದ ಉಪನ್ಯಾಸಕರಾದ ಡಾ. ಅಂಜು ಎಸ್ ಸ್ವಾಗತಿಸಿ, ಕ್ರಿಯಾ ಶಾರೀರ ವಿಭಾಗದ ಡಾ. ಅನಿಷ್ಮಾ ದೇವಿ ಅವರು ವಂದಿಸಿದರು . ನಮೃತ ಕೆ ಕಾರ್ಯಕ್ರಮ ನಿರೂಪಿಸಿದರು.
ಈ ಸಂದರ್ಭದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ ವಿ, ವಿದ್ಯಾರ್ಥಿ ಕ್ಷೇಮಾಧಿಕಾರಿ ಡಾ. ಹರ್ಷಿತಾ ಎಂ., ಸಂಸ್ಥೆಯ ಎನ್.ಎಸ್. ಎಸ್ ಎಸ್. ಘಟಕದ ಯೋಜನಾಧಿಕಾರಿ ಡಾ. ಪ್ರಮೋದ್ ಪಿ.ಎ., ಹಾಗೂ ಸಂಸ್ಥೆಯ ಭೋಧಕ, ಭೋಧಕೇತರ ಸಿಬ್ಬಂದಿ ವರ್ಗದವರು, ಸ್ನಾತಕೋತ್ತರ ವಿದ್ಯಾರ್ಥಿಗಳು, ಪದವಿ ವಿದ್ಯಾರ್ಥಿಗಳು, ಹಾಗೂ ಕಲಿಕಾ ವೈದ್ಯರುಗಳು ಉಪಸ್ಥಿತರಿದ್ದರು.