ಸುಳ್ಯ:ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಸ್ವಸ್ಥವೃತ್ತ ವಿಭಾಗ, ಹಾಗೂ ಆಯುಷ್ ಇಲಾಖೆ ಮಂಗಳೂರು ಇದರ ಸಹಯೋಗದೊಂದಿಗೆ 9ನೇ ವರ್ಷದ ಅಂತರಾಷ್ಟ್ರೀಯ ಯೋಗ ದಿನಾಚರಣೆಯನ್ನು ಆಚರಿಸಲಾಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ.ವಿ.ಚಿದಾನಂದ, ದೀಪ ಬೆಳಗಿಸಿ
ಕಾರ್ಯಕ್ರಮವನ್ನು ಉದ್ಘಾಟಿಸಿ ಶುಭ ಹಾರೈಸಿದರು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಮುಖ್ಯ ಅತಿಥಿಗಳಾಗಿದ್ದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಎನ್.ಎಸ್.ಎಸ್. ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ
ವಿದ್ಯಾರ್ಥಿಗಳಿಂದ ಯೋಗ ಪ್ರಾತ್ಯಕ್ಷಿಕೆ ನಡೆಯಿತು. ಡಾ. ಅನುಷಾ ಯಂ., ಡಾ. ನಮೀತ ಶೆಟ್ಟಿ, ಡಾ. ಪೂಜಾ, ಹಾಗೂ ಮಿ. ಮಹಂತ್ ರಾಜ್ ಇವರು ಕಾಲೇಜಿನ ಸ್ವಸ್ಥವೃತ್ತ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಜಯವಾಣಿ ಯಂ. ಜಿ., ಡಾ. ಶಭೀನಾ ಟಿ. ಟಿ., ಇವರ ಮಾರ್ಗದರ್ಶನದಲ್ಲಿ ಯೋಗ ಪ್ರಾತ್ಯಕ್ಷಿಕೆಯನ್ನು ನಡೆಸಿಕೊಟ್ಟರು.
ಅಂತರಾಷ್ಟ್ರೀಯ ಯೋಗ ದಿನಾಚರಣೆ ಪ್ರಯುಕ್ತ ಸಂಸ್ಥೆಯ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಆಯೋಜಿಸಲಾಗಿದ್ದು, ವಿಜೇತರಿಗೆ ಬಹುಮಾನ ವಿತರಿಸಲಾಯಿತು.
ಕಾಲೇಜಿನ ಎಲ್ಲಾ ವಿಭಾಗ ಮುಖ್ಯಸ್ಥರು, ಪ್ರಾಧ್ಯಾಪಕರು, ಸಹ ಪ್ರಾಧ್ಯಾಪಕರು, ಬೋಧಕೇತರ ಸಿಬ್ಬಂದಿ ವರ್ಗ, ಹಾಗೂ ಕಾಲೇಜಿನ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಡಾ. ದಿಲ್ಶಾನ ಕಾರ್ಯಕ್ರಮ ನಿರೂಪಿಸಿದರು.