ಸುಳ್ಯ:ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ ಅಧ್ಯಕ್ಷ ಡಾ. ಕೆ. ವಿ. ಚಿದಾನಂದ ಧ್ವಜಾರೋಹಣ ನ ನೆರವೇರಿಸಿ ಸ್ವಾತಂತ್ರ್ಯೋತ್ಸವದ ಸಂದೇಶ ನೀಡಿದರು.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ನ
ಉಪಾಧ್ಯಕ್ಷೆ ಶೋಭಾ ಚಿದಾನಂದ, ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ. ಸಿ., ಕಾರ್ಯದರ್ಶಿ ಡಾ. ಐಶ್ವರ್ಯ ಕೆ. ಸಿ., ಕೌನ್ಸಿಲ್ ಮೆಂಬರ್ ಜಗದೀಶ್ ಅಡ್ತಲೆ, ಕೆ.ವಿ.ಜಿ ಆಯುರ್ವೇದ ಮೆಡಿಕಲ್ ಕಾಲೇಜ್ ಮತ್ತು ಆಸ್ಪತ್ರೆಯ ಪ್ರಾಂಶುಪಾಲರಾದ ಡಾ. ಲೀಲಾಧರ್ ಡಿ. ವಿ., ಸಂಸ್ಥೆಯ ಎನ್.ಎಸ್.ಎಸ್ ಯೋಜನಾಧಿಕಾರಿ ಡಾ. ಪ್ರಮೋದ್ ಪಿ. ಎ. ಹಾಗೂ ಸಂಸ್ಥೆಯ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗ, ಸ್ನಾತಕೋತ್ತರ ವಿದ್ಯಾರ್ಥಿಗಳು, ಕಲಿಕಾ ವೈದ್ಯರುಗಳು, ಪದವಿ ವಿದ್ಯಾರ್ಥಿಗಳು, ಉಪಸ್ಥಿತರಿದ್ದರು.