ಸುಳ್ಯ: ಗ್ರಾಮೀಣ ಪ್ರದೇಶವನ್ನು ಶಿಕ್ಷಣ ಕಾಶಿಯಾಗಿ ಪರಿವರ್ತಿಸಿರುವುದು ಡಾ.ಕುರುಂಜಿ ವೆಂಕಟ್ರಮಣ ಗೌಡರ ದೊಡ್ಡ ಸಾಧನೆ. ಗ್ರಾಮೀಣ ಪ್ರದೇಶವಾಗಿದ್ದ ಸುಳ್ಯವನ್ನು ಎಜ್ಯುಕೇಶನ್ ಹಬ್ ಆಗಿ ಪರಿವರ್ತಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ ಎಂದು ಶಿವಮೊಗ್ಗ ಕುವೆಂಪು ವಿಶ್ವ ವಿದ್ಯಾನಿಲಯದ ಮಾಜಿ ಉಪ ಕುಲಪತಿ ಡಾ.ಕೆ.ಚಿದಾನಂದ ಗೌಡ ಹೇಳಿದ್ದಾರೆ.ಕುರುಂಜಿ ಜಾನಕಿ ವೆಂಕಟ್ರಮಣ ಗೌಡ ಸಮುದಾಯ ಭವನ ಸಭಾಭವನದಲ್ಲಿ ನಡೆದ ಸುಳ್ಯ ಕೆವಿಜಿ ದಂತ ಮಹಾವಿದ್ಯಾಲಯದ ಪದವಿ ಪ್ರದಾನ ಸಮಾರಂಭ ಹಾಗೂ ಕಾಲೇಜು ವಾರ್ಷಿಕೋತ್ಸವ ಸಮಾರಂಭವನ್ನು
ಉದ್ಘಾಟಿಸಿ ಪದವಿ ಪಡೆದ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಿ ಅವರು ಮಾತನಾಡಿದರು. ಹಲ್ಲು ಪ್ರತಿಯೊಬ್ಬ ವ್ಯಕ್ತಿಗೂ, ಪ್ರಾಣಿಗಳಿಗೆ ದಂತಗಳು ಅತೀ ಮುಖ್ಯ. ಅದರಂತೆ ಹಲ್ಲಿನ ಆರೋಗ್ಯ ಮತ್ತು ಸೌಂದರ್ಯವನ್ನು ಕಾಪಾಡುವುದು ಅಸ್ಟೇ ಮುಖ್ಯ ಎಂದು ಅವರು ಹೇಳಿದರು. ಪದವಿ ಪಡೆದ ವಿದ್ಯಾರ್ಥಿಗಳು ತಮ್ಮ ವೃತ್ತಿ ಜೀವನದಲ್ಲಿ ಅತ್ಯುತ್ತಮ ಸೇವೆಯ ಮೂಲಕ ಎಲ್ಲರ ಮುಖದಲ್ಲಿ ನಗು ಅರಳುವಂತೆ ಮಾಡಬೇಕು ಎಂದು ಹಾರೈಸಿದರು.

ಎಒಎಲ್ಇ ‘ಕಮಿಟಿ ಬಿ’ಯ ಚೆಯರ್ಮೆನ್ ಡಾ.ರೇಣುಕಾಪ್ರಸಾದ್ ಕೆ.ವಿ
ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು.
ಎಒಎಲ್ಇ ‘ಕಮಿಟಿ ಬಿ’ ಯ ಕಾರ್ಯದರ್ಶಿ ಡಾ.ಜ್ಯೋತಿ ಆರ್ ಪ್ರಸಾದ್, ಕೆವಿಜಿ ದಂತ ಮಹಾವಿದ್ಯಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ, ಕಾಲೇಜಿನ ಪ್ರಾಂಶುಪಾಲರಾದ ಮೋಕ್ಷಾ ನಾಯಕ್, ಗವರ್ನಿಂಗ್ ಕೌನ್ಸಿಲ್ ಸದಸ್ಯರಾದ ಎನ್.ಎ.ರಾಮಚಂದ್ರ, ಜಾಕೆ ಮಾಧವ ಗೌಡ ಅತಿಥಿಗಳಾಗಿ ಭಾಗವಹಿಸಿದ್ದರು.

ವಿವಿಧ ವಿಭಾಗಗಳ ಮುಖ್ಯಸ್ಥರಾದ ಡಾ.ಶರತ್ ಕುಮಾರ್ ಶೆಟ್ಟಿ, ಡಾ.ಸವಿತಾ ಸತ್ಯಪ್ರಸಾದ್, ಡಾ.ಎಂ.ಎಂ.ದಯಾಕರ್, ಡಾ.ನಸ್ರತ್ ಫರೀದ್, ಡಾ.ಜಯಪ್ರಸಾದ್ ಆನೆಕಾರ್, ಡಾ.ಸುಹಾಸ್ ರಾವ್, ಡಾ.ಪ್ರಸನ್ನ ಕುಮಾರ್, ಡಾ.ಶೈಲಾ ಎಂ, ಕೆವಿಜಿ ದಂತ ಮಹಾ ವಿದ್ಯಾಲಯದ ಆಡಳಿತಾಧಿಕಾರಿ ಮಾಧವ ಬಿ.ಟಿ, ಡಾ.ಮನೋಜ್ ಅಡ್ಡಂತ್ತಡ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಡಾ.ಕೃಷ್ಣಪ್ರಸಾದ್ ಸ್ವಾಗತಿಸಿದರು. ಕೆವಿಜಿ ದಂತ ಮಹಾವಿದ್ಯಾಲಯದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಮೋಕ್ಷಾ ನಾಯಕ್ ವರದಿ ವಾಚಿಸಿದರು. ಡಾ.ರೇವಂತ್ ವಂದಿಸಿದರು. ಡಾ.ಮನಿಷಾ ರೈ, ಡಾ.ಫಾತಿಮಾ ಶಿದಾ ಕಾರ್ಯಕ್ರಮ ನಿರೂಪಿಸಿದರು. ಕ್ರೀಡೆ, ಶೈಕ್ಷಣಿಕ ಹಾಗೂ ಇತರ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಗೌರವಿಸಲಾಯಿತು.
ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.









