ಸುಳ್ಯ: ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ನಡೆಯಿತು. ಡೆಂಟಲ್ ಕಾಲೇಜಿನ ಎಕ್ಸಿಕ್ಯುವ್ ಡೈರೆಕ್ಟರ್ ಮೌರ್ಯ ಆರ್. ಕುರುಂಜಿ ದೀಪ ಬೆಳಗಿಸಿ ಸಮಾರಂಭವನ್ನು ಉದ್ಘಾಟಿಸಿದರು. ಕಾಲೇಜಿನ
ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಕಾಲೇಜಿನ ವತಿಯಿಂದ ಸ್ವಾಗತಿಸಲಾಯಿತು. ಈ ಸಂದರ್ಭದಲ್ಲಿ ಕಾರ್ಯದರ್ಶಿಗಳು, ಎ.ಓ.ಎಲ್.ಇ. ಕಮಿಟಿ (ಬಿ)ಯ ಕಾರ್ಯದರ್ಶಿ ಡಾ. ಜ್ಯೋತಿ ಆರ್. ಪ್ರಸಾದ್, ಕಾಲೇಜಿನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ. ಯವರು ನೂತನ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು.
ಎಲ್ಲಾ ವಿಭಾಗ ಮುಖ್ಯಸ್ಥರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿಭಾಗಗಳ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿ ಶುಭ ಹಾರೈಸಿದರು. ಹಾಗೂ ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಡಾ. ಸುಪ್ರೀಯಾ ಹೆಚ್. ವಂದನಾರ್ಪಣೆಗೈದರು. ಡಾ. ಮನೀಶಾ ರೈ ಕಾರ್ಯಕ್ರಮವನ್ನು ನಿರೂಪಿಸಿದರು.