ಸುಳ್ಯ:ಬಾಯಿ, ಮುಖದ ಹಾಗೂ ದವಡೆ ಶಸ್ತ್ರಚಿಕಿತ್ಸಕರ ದಿನಾಚರಣೆ ಕೆ.ವಿ.ಜಿ ದಂತ ಮಹಾವಿದ್ಯಾಲಯದಲ್ಲಿ ನಡೆಯಿತು.
ಭಾರತೀಯ ದಂತ ವೈದ್ಯಕೀಯ ಸಂಘ, ಸುಳ್ಯ ಶಾಖೆಯ ಸಹಯೋಗದೊಂದಿಗೆ ನಡೆದ ಬಾಯಿ,ಮುಖದ ಹಾಗೂ ದವಡೆ ಶಸ್ತ್ರಚಿಕಿತ್ಸೆ ವಿಭಾಗದ ವತಿಯಿಂದ ನಡೆದ ಕಾರ್ಯಕ್ರಮವನ್ನು
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷಮ್ ಕಮಿಟಿ ಬಿ ಇದರ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು.ಜೆ ಉದ್ಘಾಟಿಸಿದರು. ಕೆ.ವಿ.ಜಿ ದಂತ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ. ಮೋಕ್ಷಾ ನಾಯಕ್ ಅಧ್ಯಕ್ಷತೆ ವಹಿಸಿದ್ದರು. ಭಾರತೀಯ ದಂತ ವೈದ್ಯಕೀಯ ಸಂಘ, ಸುಳ್ಯ ಶಾಖೆಯ ಅಧ್ಯಕ್ಷ ಡಾ. ಶರತ್ ಕುಮಾರ್ ಶೆಟ್ಟಿ ಉಪಸ್ಥಿತರಿದ್ದರು.
ಹಿರಿಯ ಪ್ರಾಧ್ಯಾಪಕರಾದ ಡಾ. ಮಹಾಬಲೇಶ್ವರ ಸಿ.ಹೆಚ್.ರವರು ಹೃದಯ ಪುನಶ್ಚೇತನ ತರಬೇತಿಯನ್ನು ವೃತ್ತಿನಿರತ ದಂತ ವೈದ್ಯರಿಗೆ ಮತ್ತು ಭೋದಕೇತರ ಸಿಬ್ಬಂದಿ ವರ್ಗದವರಿಗೆ ನೀಡಿದರು. ಡಾ. ರಚನ ಪಿ.ಬಿ., ಡಾ.ದಿಬಾಕರ್ ಸೂತ್ರದಾರ್ ಹಾಗೂ ಡಾ. ಸಂದೀಪ್ ಬಿರ್ಮುಕಜೆ ಪ್ರಾತ್ಯಕ್ಷಿಕೆ ನೀಡುವ ಮೂಲಕ ಸಹಕರಿಸಿದರು.
ಶಸ್ತ್ರಚಿಕಿತ್ಸಾ ವಿಭಾಗದ ಮುಖ್ಯಸ್ಥರು, ಡಾ. ಪ್ರಸನ್ನ ಕುಮಾರ್ ಡಿ. ಸ್ವಾಗತಿಸಿ ಪ್ರಾಸ್ತಾವಿಕವಾಗಿ ಮಾತನಾಡಿದರು.









