ಸುಳ್ಯ: ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯಲ್ಲಿ ನೂತನ ಸ್ನಾತಕೋತ್ತರ ದಂತ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮ ನಡೆಯಿತು.
ಎ.ಒ.ಎಲ್.ಇ ‘ಕಮಿಟಿ ಬಿ’ಯ ಕಾರ್ಯದರ್ಶಿ ಡಾ.ಜ್ಯೋತಿ ಆರ್ ಪ್ರಸಾದ್ ದೀಪ ಬೆಳಗಿಸಿ ಉದ್ಘಾಟಿಸಿ ಶುಭ ಹಾರೈಸಿದರು. ಕೆ.ವಿ.ಜಿ ದಂತ ಮಹಾವಿದ್ಯಾಲಯ ಮತ್ತು
ಆಸ್ಪತ್ರೆಯ ಕಾರ್ಯನಿರ್ವಾಹಕ ನಿರ್ದೇಶಕ ಮೌರ್ಯ ಆರ್ ಕುರುಂಜಿ ಶುಭ ಹಾರೈಸಿದರು. ಕಾಲೇಜಿನ ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಸ್ವಾಗತಿಸಿ,ಪ್ರಾಸ್ತಾವಿಕವಾಗಿ ಮಾತನಾಡಿದರು. ಎಲ್ಲಾ ವಿದ್ಯಾರ್ಥಿಗಳಿಗೆ ಪುಷ್ಪ ನೀಡಿ ಕಾಲೇಜಿನ ವತಿಯಿಂದ ಸ್ವಾಗತಿಸಲಾಯಿತು.ಎಲ್ಲಾ ವಿಭಾಗ ಮುಖ್ಯಸ್ಥರುಗಳು ಈ ಸಂದರ್ಭದಲ್ಲಿ ಉಪಸ್ಥಿತರಿದ್ದು ವಿಭಾಗಗಳ ಕಾರ್ಯಚಟುವಟಿಕೆಗಳ ಬಗ್ಗೆ ಮಾತನಾಡಿದರು. ಈ ಸಂದರ್ಭದಲ್ಲಿ ಕಾಲೇಜಿನ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು. ಉಪಪ್ರಾಂಶುಪಾಲೆ ಡಾ. ಶೈಲಾ ಪೈ ವಂದಿಸಿದರು ಡಾ.ಕಾರ್ಲಿನ್ ಕಾರ್ಯಕ್ರಮ ನಿರೂಪಿಸಿದರು.












