ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಅಂತಿಮ ವರ್ಷದ ವಿದ್ಯಾರ್ಥಿಗಳಿಂದ 2023-24 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ, “ಎಕ್ಸ್ಪೋ–2024” ನಡೆಯಿತು. “ಎಕ್ಸ್ಪೋ–2024” ಪ್ರೊಜೆಕ್ಟ್ ಎಕ್ಸ್ಪೋ ಉದ್ಘಾಟನೆಯನ್ನು ಕೆ.ವಿ.ಜಿ. ಐ.ಟಿ.ಐ. ಭಾಗಮಂಡಲ ಕಾಲೇಜಿನ ಪ್ರಾಂಶುಪಾಲರಾದ ಶ್ರೀಕಾಂತ್ ಕೆ.ಬಿ. ನೆರವೇರಿಸಿ ಮಾತನಾಡಿ ಶುಭ ಹಾರೈಸಿದರು. ಪ್ರಾಜೆಕ್ಟ್ ಪ್ರದರ್ಶನದ ಸಮಾರಂಭದ ದೀಪ ಬೆಳಗಿಸಿದ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ. ಮಾತನಾಡಿ ವಿದ್ಯಾರ್ಥಿಗಳು
ವಿವಿಧ ಯೋಜನೆಗಳನ್ನು ಮಾಡಿ ಹೊಸ ತಂತ್ರಜ್ಞಾನಗಳನ್ನು ಅರಿತುಕೊಳ್ಳಬೇಕು ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ವಿವಿಧ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಂದ ಉತ್ತಮ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡಿದ್ದು, ವಿದ್ಯಾರ್ಥಿಗಳ ಆಸಕ್ತಿ, ಶ್ರಮ ಮತ್ತು ಸೃಜನಶೀಲತೆಗೆ ಮತ್ತು ಬೋಧಕ ವೃಂದದಿಂದ ನೀಡಲ್ಪಟ್ಟ ಸೂಕ್ತ ಮಾರ್ಗದರ್ಶನಕ್ಕೆ ಪ್ರಾಂಶುಪಾಲರು ಹಾಗೂ ಆಡಳಿತ ಮಂಡಳಿ ಮೆಚ್ಚುಗೆ ವ್ಯಕ್ತಪಡಿಸಿ ಶುಭಹಾರೈಸಿದ್ದಾರೆ.
ಕಾರ್ಯಕ್ರಮದಲ್ಲಿ ಪ್ರೊ. ಶ್ರೀಕಾಂತ್ ಕೆ.ಬಿ. ಅವರನ್ನು ಕಾಲೇಜಿನ ವತಿಯಿಂದ ಸನ್ಮಾನಿಸಲಾಯಿತು ಹಾಗೂ ಕಾರ್ಯಕ್ರಮದಲ್ಲಿ ಉಪಪ್ರಾಂಶುಪಾಲರು ಮತ್ತು ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ.ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಡೀನ್ ರಿಸರ್ಚ್ ಡಾ. ಸವಿತಾ ಸಿ.ಕೆ. ಮತ್ತು ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಪ್ರಶಾಂತ್ ಕಕ್ಕಾಜೆ ಉಪಸ್ಥಿತರಿದ್ದರು.
ವಿದ್ಯಾರ್ಥಿನಿ ದೇಚಮ್ಮ ಬಿ.ಎ. ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಪ್ರಾಧ್ಯಾಪಕರಾದ ಪ್ರೊ. ರಾಘವೆಂದ್ರ ಆರ್. ಕಾಮತ್ ಧನ್ಯವಾದ ಸಮರ್ಪಿಸಿದರು. ಹಾಗೂ ಎಕ್ಸ್ಪೋ-೨೦೨೪ ಪ್ರಾಜೆಕ್ಟ್ ವೀಕ್ಷಣೆಗೆ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜು ಮತ್ತು ಕೆ.ವಿ.ಜಿ. ಐ.ಪಿ.ಎಸ್.ನ ವಿದ್ಯಾರ್ಥಿಗಳು ಆಗಮಿಸಿದರು. ಸಾರ್ವಜನಿಕರು ಕೂಡಾ ಪ್ರಾಜೆಕ್ಟನ್ನು ವೀಕ್ಷಿಸಿ ಅದರ ಸದುಪಯೋಗ ಪಡೆದುಕೊಂಡರು. ಕಾಲೇಜಿನ ನಾಲ್ಕು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು 27 ಪ್ರಾಜೆಕ್ಟ್ಗಳು ಪ್ರದರ್ಶಿನಗೊಂಡವು.