ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು, ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಜ್ವಲ್ ಯು.ಜೆ.ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿ ಕ್ರೀಡೆಯು ದೈಹಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು
ಹೆಚ್ಚಿಸಿ ಉತ್ತಮ ಆರೋಗ್ಯವನ್ನು ನೀಡುತ್ತದೆ. ಆದುದರಿಂದ ಕ್ರೀಡಾ ಚಟುವಟಿಕೆಯಲ್ಲಿ ಎಲ್ಲಾ ವಿದ್ಯಾರ್ಥಿಗಳು ಪಾಲ್ಗೊಳ್ಳಬೇಕು ಎಂದು ಹೇಳಿದರು.
ನಿವೃತ್ತ ದೈಹಿಕ ಶಿಕ್ಷಕರು ಹಾಗೂ ಲಗೋರಿ ಅಸೋಸಿಯೇಶನ್ನ ರಾಜ್ಯಾಧ್ಯಕ್ಷರಾರ ದೊಡ್ಡಣ್ಣ ಬರೆಮೇಲು ಮುಖ್ಯ ಅತಿಥಿಗಳಾಗಿ ಮಾತನಾಡಿ ಮಕ್ಕಳ ಸರ್ವಾಂಗೀಣ ಅಭಿವೃದ್ಧಿಗೆ ಕ್ರೀಡೆಯ ಮಹತ್ವ ಬಹಳ ಹೆಚ್ಚಿನದ್ದು. ಕ್ರೀಡೆಯಲ್ಲಿ ಹೆಚ್ಚಿನ ಸಾಧನೆ ಮಾಡಿದ ವಿದ್ಯಾರ್ಥಿಗಳಿಗೆ ಸರಕಾರದ ಉದ್ಯೋಗಾವಕಾಶ ಹೆಚ್ಚು ಎಂದು ಹೇಳಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಶುಭ ಹಾರೈಸಿದರು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ದೈಹಿಕ ಶಿಕ್ಷಕರಾದ ತೀರ್ಥವರ್ಣ ತೀರ್ಪುಗಾರರಾಗಿ ಸಹಕರಿಸಿದರು. ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್.ಬಿ., ಪ್ರೊ. ಅಜಿತ್ ಬಿ.ಟಿ., ಎನ್.ಎಸ್.ಎಸ್ ಘಟಕಾಧಿಕಾರಿ ಡಾ. ಪ್ರಜ್ಞಾ ಎಂ.ಆರ್ ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟದ ಕಾರ್ಯಕ್ರಮವನ್ನು ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಪ್ರಸನ್ನ ಕುಮಾರ್ ಕಲ್ಲಾಜೆ, ಮಾಧವ ಬಿ.ಟಿ., ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.









