ಸುಳ್ಯ:ಕೆ.ವಿ.ಜಿ.ತಾಂತ್ರಿಕ ಮಹಾವಿದ್ಯಾಲಯದಲ್ಲಿ ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಹುಟ್ಟು ಹಬ್ಬದ ಪ್ರಯುಕ್ತ ಶಿಕ್ಷಕರ ದಿನಾಚರಣೆಯನ್ನು ಆಚರಿಸಲಾಯಿತು. ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಲಾಯಿತು. ಕಾಲೇಜಿನ
ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು
ಡಾ. ಸರ್ವಪಲ್ಲಿ ರಾಧಾಕೃಷ್ಣನ್ ಅವರಿಗೆ ನುಡಿನಮನ ಸಲ್ಲಿಸಿದರು ಹಾಗೂ ಶಿಕ್ಷಕರ ದಿನಾಚರಣೆಯ ಮಹತ್ವವನ್ನು ತಿಳಿಸಿ ಸಂಸ್ಥೆಯ ಎಲ್ಲಾ ಶಿಕ್ಷಕರಿಗೆ ಶುಭಾಶಯ ಕೋರಿದರು. ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ಅವರು ಮಾತನಾಡಿ ಜೀವನದ ಪಾಠವನ್ನು ಕಲಿಸಿಕೊಡುವ ಶಿಕ್ಷಕರಿಗೆ ಇದೊಂದು ಬಹುಮುಖ್ಯ ದಿನ ಎಂದು ಹೇಳಿದರು ಸಂಸ್ಥೆಯ ಹಿರಿಯ ಪ್ರಾಧ್ಯಾಪಕರು ಹಾಗೂ ಉಪಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ. ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡೀನ್ಗಳು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.