ಸುಳ್ಯ: ಕೆ.ವಿ.ಜಿ ಇಂಜಿನಿಯರಿಂಗ್ ಕಾಲೇಜಿನ 2023ನೇ ಸಾಲಿನ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಧ್ಯಾನ್ ಟಿ.ಡಿ. ಬ್ಲಾಕ್ ಕಾಫರ್ ಕಂಪೆನಿಗೆ, ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಭಾನುಪ್ರಸಾದ್ ಯು.ಬಿ. ಆಲ್ಟ್ರಾ ಟೆಕ್ ಸಿಮೆಂಟ್ ಕಂಪೆನಿಗೆ ಮತ್ತು ಪುನೀತ್ ಹೆಚ್. ಆರ್. ಇನ್ಪ್ರಾ ಮಾರ್ಕೇಟ್ ಕಂಪೆನಿಗೆ
ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ನಿತಿನ್ ಜಿ.ಎಂ. ಬೋಶ್ ಕಂಪೆನಿಗೆ ಆಯ್ಕೆಯಾಗಿದ್ದಾರೆ. ಕಾಲೇಜು ಆಡಳಿತ ಮಂಡಳಿಯ ಅಧ್ಯಕ್ಷ ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲರು ಹಾಗೂ ಡೀನ್ ಸ್ಟುಡೆಂಟ್ ಅಫೇರ್ಸ್ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು
ಡಾ. ಚಂದ್ರಶೇಖರ್ ಎ., ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.