ಸುಳ್ಯ:ಮೇ.21 ರಂದು ಕೆ.ವಿ.ಜಿ. ತಾಂತ್ರಿಕ ಮಹಾ ವಿದ್ಯಾಲಯದಲ್ಲಿ 2023-24ನೇ ಸಾಲಿನ ಅಂತಿಮ ವರ್ಷದ ಪದವಿ ಪೂರ್ಣಗೊಳಿಸಿದ ವಿದ್ಯಾರ್ಥಿಗಳಿಗೆ ಪದವಿ ಪತ್ರ ಪ್ರಧಾನ ಕಾರ್ಯಕ್ರಮ(ಗ್ರಾಜ್ಯುವೇಷನ್ ಡೇ) ನಡೆಯಲಿದೆ. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಎಒಎಲ್ಇಯ ಕಮಿಟಿ ‘ಬಿ’ ಚೆತರ್ಮೆನ್ ಡಾ. ರೇಣುಕಾಪ್ರಸಾದ್ ಕೆ.ವಿ ಅವರು ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ
ವಿಶ್ವೇಶ್ವರಯ್ಯ ತಾಂತ್ರಿಕ ಮಹಾವಿದ್ಯಾಲಯದ ರಿಜಿಸ್ಟ್ರಾರ್(ಇವ್ಯಾಲ್ಯುವೇಷನ್) ಡಾ. ಟಿ.ಎನ್. ಶ್ರೀನಿವಾಸ ಅವರು ಆಗಮಿಸಲಿದ್ದಾರೆ ಹಾಗೂ ಇನ್ನೋರ್ವ ಅತಿಥಿಗಳಾಗಿ ಡಾ. ತಿಪ್ಪೇಸ್ವಾಮಿ ಜಿ ಪ್ರೊಫೆಸರ್ ಹಾಗೂ ಮುಖ್ಯಸ್ಥರು ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿAಗ್, ಬಿ.ಎಂ.ಎಸ್. ಇನ್ಸಿಟಿಟ್ಯೂಟ ಆಫ್ ಟೆಕ್ನಾಲಜಿ & ಮ್ಯಾನೇಜ್ಮೆಂಟ್, ಬೆಂಗಳೂರು ಇವರು ಆಗಮಿಸಲಿದ್ದಾರೆ. ಈ ಸಮಾರಂಭದಲ್ಲಿ ಪದವಿ ಮತ್ತು ಸ್ನಾತಕೋತ್ತರ ಪದವಿಯನ್ನು ಪೂರ್ಣಗೊಳಿಸಿದ ಸುಮಾರು 200 ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ ಎಂದು ಕಾಲೇಜಿನ ಪತ್ರಿಕಾ ಪ್ರಕಟಣೆಯಲ್ಲಿ ಕೆ.ವಿ.ಜಿ. ಕಾಲೇಜ್ ಆಫ್ ಇಂಜಿನಿಯರಿಂಗ್ ಸುಳ್ಯ ಇದರ ಕಾಲೇಜಿನ ಸಿ.ಇ.ಒ., ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿAಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.