ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ಗ್ರಾಜ್ಯುವೇಶನ್ ಡೇ ಅಮರಶ್ರೀ ಭಾಗ್ನ ಶ್ರೀ ಜಾನಕಿ ವೆಂಕಟ್ರಮಣ ಗೌಡ ಸಭಾಭವನದಲ್ಲಿ ನಡೆಯಿತು. ನಿಟ್ಟೆಯ ಉಪಕುಲಪತಿಗಳಾದ ಡಾ. ಎಂ.ಎಸ್. ಮೂಡಿತ್ತಾಯ ಅತಿಥಿಯಾಗಿದ್ದರು.2025ರಲ್ಲಿ ವಿ.ಟಿ.ಯು. ರ್ಯಾಂಕ್ ಪಡೆದ ವಿದ್ಯಾರ್ಥಿಗಳಿಗೆ
ಕೆ.ವಿ.ಜಿ. ಚಿನ್ನದ ಪದಕ ಹಾಗೂ ಸ್ಮರಣಿಕೆಯನ್ನು ನೀಡಿ ಮತ್ತು ಗ್ರಾಜ್ಯುವೇಶನ್ ಪಡೆದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಸ್ಮರಣಿಕೆಯನ್ನು ವಿತರಿಸಲಾಯಿತು.ಕೆವಿಜಿ ಡೆಂಟಲ್ ಕಾಲೇಜು ಮತ್ತು ಆಸ್ಪತ್ರೆಯ ಎಕ್ಸಿಕ್ಯುಟಿವ್ ಡೈರೆಕ್ಟರ್ ಮೌರ್ಯ ಆರ್. ಕುರುಂಜಿ ಕಾಲೇಜು ಮ್ಯಾಗಸೀನ್ ಶಿಲ್ಪಿ ಬಿಡುಗಡೆ ಮಾಡಿದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲ ಡಾ. ಸುರೇಶ ವಿ. ವಹಿಸಿದ್ದರು. ವೇದಿಕೆಯಲ್ಲಿ ಮೇಲೆ ಕಾಲೇಜಿನ ಆಡಳಿತ ಮಂಡಳಿಯ ಸದಸ್ಯರಾದ ನಿತ್ಯಾನಂದ ಮುಂಡೋಡಿ, ಸಂತೋಷ್ ಜಾಕೆ ಮತ್ತು ಕಾಲೇಜಿನ ಎಲ್ಲಾ ವಿಭಾಗಗಳ ಮುಖ್ಯಸ್ಥರು, ಡೀನ್ಗಳು ಉಪಸ್ಥಿತರಿದ್ದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ. ಇವರು ಸ್ವಾಗತಿಸಿ, ಡೀನ್ ಅಕಾಡೆಮಿಕ್ ಡಾ. ಪ್ರಜ್ಞಾ ಎಂ.ಆರ್. ವಂದಿಸಿದರು.











