ಸುಳ್ಯ: ಜಾನಕಿ ವೆಂಕಟ್ರಮಣ ಗೌಡರವರ 11ನೇ ಪುಣ್ಯ ಸ್ಮರಣೆ ಕಾರ್ಯಕ್ರಮ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ ನಡೆಯಿತು.ಉಪಪ್ರಾಂಶುಪಾಲ ಡಾ.ಶ್ರೀಧರ ಕೆ. ಮತ್ತು ಡೀನ್-ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ
ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಪೂಜ್ಯರ ಭಾವಚಿತ್ರದ ಮುಂದೆ ದೀಪ ಬೆಳಗಿಸಿ ಪುಷ್ಪ ನಮನ ಸಲ್ಲಿಸಿದರು. ಇದೇ ಸಂದರ್ಭದಲ್ಲಿ ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ., ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊಫೆಸರ್ ಪ್ರೊ. ಲೋಕೇಶ್ ಪಿ.ಸಿ. ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬಂಧಿಗಳು ಭಾಗವಹಿಸಿದ್ದರು.