ಸುಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ೨೦೨೪-೨೫ ಸಾಲಿನ ಪ್ರಥಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳ ಸ್ವಾಗತ ಕಾರ್ಯಕ್ರಮವು ಕಾಲೇಜಿನ ಸಭಾಂಗಣದಲ್ಲಿ ನಡೆಯಿತು. ಮುಖ್ಯ ಅತಿಥಿಗಳಾದ ಬ್ಯಾಂಕ್ ಆಫ್ ಬರೋಡಾ ಸುಳ್ಯ ಶಾಖೆಯ ಸುಪ್ರೀತಾ ಕೆ.ಎಸ್. ವಿದ್ಯಾಭ್ಯಾಸದ ಮಹತ್ವ ಮತ್ತು ಪೋಷಕರೊಂದಿಗೆ ಯಾವ ರೀತಿಯಲ್ಲಿ ವರ್ತಿಸಬೇಕು ಎಂಬುದಾಗಿ ತಿಳಿಸಿದರು. ಗೌರವ ಅತಿಥಿಗಳ ನೆಲೆಯಲ್ಲಿ ಮಾತನಾಡಿದ
ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು,ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್
ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ.ಯವರು ಕೌಶಲ್ಯಗಳನ್ನು ಜೀವನದಲ್ಲಿ ಅಭಿವೃದ್ಧಿಪಡಿಸಿಕೊಂಡರೆ ಅವಕಾಶಗಳನ್ನು ಹೇಗೆ ಸದುಪಯೋಗ ಪಡಿಸಿಕೊಳ್ಳಬಹುದೆಂದು ಸಲಹೆ ನೀಡಿದರು. ಎಂ.ಬಿ.ಎ. ವಿಭಾಗ ಮುಖ್ಯಸ್ಥರಾದ ಪ್ರೊ. ಕೃಷ್ಣಾನಂದ ಎ. ಸ್ವಾಗತಿಸಿ, ಆದರ್ಶ ಡಿ. ಪ್ರಾಧ್ಯಾಪಕರು, ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ವಂದಿಸಿದರು ಹಾಗೂ ಎಂ.ಬಿ.ಎ. ವಿಭಾಗದ ಪ್ರೊ. ಶ್ರೀಮಣಿ ಕೆ. ಮತ್ತು ಪ್ರೊ. ರಮ್ಯ ಎ.ಬಿ.ಯವರು ಕಾರ್ಯಕ್ರಮ ನಿರೂಪಿಸಿದರು.