ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನಲ್ಲಿ 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಿಂದ 2024-25 ಸಾಲಿನ ಶೈಕ್ಷಣಿಕ ವರ್ಷದ ಮಿನಿಪ್ರಾಜೆಕ್ಟ್ ಪ್ರದರ್ಶನ “ಸ್ಪಾರ್ಕ್-2024-25 ನಡೆಯಿತು. ಮಿನಿಪ್ರಾಜೆಕ್ಟ್ ಪ್ರದರ್ಶನದ ಉದ್ಘಾಟನೆಯನ್ನು ಕೆ.ವಿ.ಜಿ. ಪವರ್ಹೌಸ್ನ ಚೀಪ್ ಎಕ್ಸೆಕ್ಯುಟಿವ್ ಇಂಜಿನಿಯರ್ ವಸಂತ ಗೌಡ ಕಿರಿಭಾಗ ನೆರವೇರಿಸಿ ಮಾತನಾಡಿ ನಮ್ಮ ಕೃಷಿಪ್ರಧಾನ ಪ್ರದೇಶಕ್ಕೆ ಅನುಕೂಲವಾಗುವಂತಹ ಕೃಷಿ ಪ್ರೊಜೆಕ್ಟ್ಗಳನ್ನು
ಅಭಿವೃದ್ಧಿಗೊಳಿಸಬೇಕು ಎಂದು ಹೇಳಿ ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಮಾತನಾಡಿ ವಿದ್ಯಾರ್ಥಿಗಳು ವಿವಿಧ ಯೋಜನೆಗಳನ್ನು ಮಾಡಿ ಹೊಸ ತಂತ್ರಜ್ಞಾನಗಳನ್ನು ಅರಿತುಕೊಳ್ಳಬೇಕು ಮತ್ತು ವಿದ್ಯಾರ್ಥಿಗಳು ಹೊಸ ತಂತ್ರಜ್ಞಾನಗಳ ಅನ್ವೇಷಣೆಯಲ್ಲಿ ತೊಡಗಿಕೊಳ್ಳಬೇಕು ಎಂದು ಹೇಳಿ ಶುಭ ಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಶುಭ ಹಾರೈಸಿದರು. ವಿವಿಧ ಇಂಜಿನಿಯರಿಂಗ್ ವಿಭಾಗಗಳ ವಿದ್ಯಾರ್ಥಿಗಳಿಂದ ಉತ್ತಮ ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡಿದ್ದವು. ಕಾರ್ಯಕ್ರಮದಲ್ಲಿ ಎಲ್ಲಾ ವಿಭಾಗ ಮುಖ್ಯಸ್ಥರು, ಡೀನ್ಗಳು ಮತ್ತು ಉಪನ್ಯಾಸಕರು ಉಪಸ್ಥಿತರಿದ್ದರು. ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿದ್ಯಾರ್ಥಿನಿ ಭೂಮಿಕಾ ಡಿ ಸ್ವಾಗತಿಸಿದರು. 5ನೇ ಸೆಮಿಸ್ಟರ್ ವಿದ್ಯಾರ್ಥಿಗಳಾದ ತ್ರಿಶಾಲಿ ಬಿ ಮತ್ತು ಪೂಜಾ ಹೆಚ್. ಪ್ರಾರ್ಥಿಸಿದರು. ೫ನೇ ಸೆಮಿಸ್ಟರ್ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿAಗ್ ವಿಭಾಗ ಶಣ್ಮುಖಾ ಸಿ, ಉದ್ಘಾಟಕರನ್ನು ಪರಿಚಯಿಸಿದರು. ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಪ್ರೊ. ರಾಘವೇಂದ್ರ ಬಿ. ಕಾಮತ್ ಧನ್ಯವಾದ ಸಮರ್ಪಿಸಿದರು. ೫ನೇ ಸೆಮಿಸ್ಟರ್ ಕಂಪ್ಯೂಟರ್ ಸೈನ್ಸ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಸೋನಿಕಾ ಎಂ.ಎಸ್. ಕಾರ್ಯಕ್ರಮ ನಿರೂಪಿಸಿದರು. ಮಿನಿಪ್ರಾಜೆಕ್ಟ್ ಪ್ರದರ್ಶನ “ಸ್ಪಾರ್ಕ್-೨೦೨೪-೨೫” ವೀಕ್ಷಣೆಗೆ ಕೆ.ವಿ.ಜಿ. ಅಮರಜ್ಯೋತಿ ಪಿ.ಯು. ಕಾಲೇಜು ಮತ್ತು ಕೆ.ವಿ.ಜಿ. ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಿಂದ ಹಲವಾರು ವಿದ್ಯಾರ್ಥಿಗಳು ಆಗಮಿಸಿದರು. ಕಾಲೇಜಿನ ನಾಲ್ಕು ಇಂಜಿನಿಯರಿಂಗ್ ವಿಭಾಗಗಳಿಂದ ಒಟ್ಟು 72 ಪ್ರಾಜೆಕ್ಟ್ಗಳು ಪ್ರದರ್ಶಿತಗೊಂಡವು.