ಸುಳ್ಯ:ಕೆ.ವಿ.ಜಿ ಇಂಜಿನಿಯರಿಂಗ್ ಮಹಾವಿದ್ಯಾಲಯದ ಅಂತಿಮ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಆಯಿಷತ್ ಮುರ್ಶಿದಾ ಬಿ.ಎಸ್. ‘ಟೆಕ್ನೂಕ್’ ಕಂಪೆನಿಗೆ, ಸಮ್ಸೀನಾ, ನಾಗ ಯಶಸ್, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಕೃತಿಕಾ ಎಸ್., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಮಲ್ಲಿಕಾರ್ಜುನ್ ಆರ್., ಮೋನೇಶ್ ಕೆ.ಕೆ., ನಿತಿನ್ ಜಿ.ಎಂ., ಚೆಗ್ ಇಂಡಿಯಾ ಪ್ರೈ.ಲಿಮಿಟೆಡ್ ಕಂಪೆನಿಗೆ, ಕಂಪ್ಯೂಟರ್
ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಾದ ಅಪೂರ್ವ, ಗುಲೆರುಕ್ಸರ್, ಹಿರಣ್ಯ, ಮೋನಿಕಾ ಹೆಚ್. ಆರ್, ಸುಕೇಶ್ ಎಸ್., ಯುರೇಶ್ ಕುಮಾರ್ ಕೆ., ಸಿವಿಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿನಿ ಭವಾನಿ ಎಸ್., ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಸಂಜೀತ್ ಸಿ.ವಿ., ಇವರು ಪೆಂಟಗನ್ ಸ್ಪೇಸ್ ಪ್ರೈ.ಲಿ. ಕಂಪೆನಿಗೆ ಆಯ್ಕೆಯಾಗಿರುತ್ತಾರೆ.
ಆಯ್ಕೆಯಾದ ವಿದ್ಯಾರ್ಥಿಗಳನ್ನು ಕಾಲೇಜಿನ ಆಡಳಿತ ಮಂಡಳಿ ಅಧ್ಯಕ್ಷ
ಡಾ. ರೇಣುಕಾಪ್ರಸಾದ್ ಕೆ.ವಿ., ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಜ್ವಲ್ ಯು.ಜೆ., ಪ್ರಾಂಶುಪಾಲರಾದ ಡಾ. ಸುರೇಶ ವಿ., ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಉಮಾಶಂಕರ್ ಕೆ.ಎಸ್., ಸಿವಿಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಚಂದ್ರಶೇಖರ್ ಎ, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಟ್ರೈನಿಂಗ್ & ಪ್ಲೇಸ್ಮೆ೦ಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ. ಹಾಗೂ ಪ್ರಾಧ್ಯಾಪಕ ವೃಂದ ಆಯ್ಕೆಯಾದ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.