ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ತೃತೀಯ ವರ್ಷದ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿ ಯಶಸ್ ರೈ ಬಿ.ಎಲ್. ದೆಹಲಿಯಲ್ಲಿ ನಡೆಯುವ ಸ್ವಾತಂತ್ರ್ಯೋತ್ಸವ ಕಾರ್ಯಕ್ರಮಕ್ಕೆ ಭಾಗವಹಿಸಲು ಕರ್ನಾಟಕ ರಾಜ್ಯದಿಂದ ವಿಶೇಷ ರಾಯಭಾರಿಯಾಗಿ ಆಯ್ಕೆಯದಾಗಿದ್ದಾರೆ. ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯ ಮುಖಾಂತರ
ರಾಷ್ಟ್ರ ಯುವಜನೋತ್ಸವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಪ್ರತಿನಿಧಿಸಲು ಆಯ್ಕೆಯಾಗಿದ್ದಾರೆ. ಇವರನ್ನು ಎ.ಒ.ಎಲ್.ಇ ಕಮಿಟಿ ‘ಬಿ’ ಚೆಯರ್ಮೆನ್ ಹಾಗೂ ರಾಜ್ಯ ಕರ್ನಾಟಕ ಒಕ್ಕಲಿಗರ ಸಂಘದ ಉಪಾಧ್ಯಕ್ಷರಾದ ಡಾ. ರೇಣುಕಾಪ್ರಸಾದ್ ಕೆ.ವಿ. ಅವರು ಶಾಲು ಹೊದಿಸಿ ನಗದು ಮೊತ್ತವನ್ನು ನೀಡಿ ಅಭಿನಂದಿಸಿ ಶುಭ ಹಾರೈಸಿದರು. ಇವರು ಕೊಡಗು ಜಿಲ್ಲೆಯ ಮೂರ್ನಾಡು ಕೊಡಂಬುರುವಿನ ಬಿ.ಎನ್. ಲವಕುಮಾರ್ ಮತ್ತು ಜಯಂತಿ ಬಿ.ಬಿ. ಅವರ ದ್ವಿತೀಯ ಪುತ್ರ. ಈ ಸಂದರ್ಭದಲ್ಲಿ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥ ಡಾ. ಉಜ್ವಲ್ ಯು.ಜೆ.,ಪ್ರಾಂಶುಪಾಲ ಡಾ. ಸುರೇಶ ವಿ., ಎಲೆಕ್ಟಾçನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರು ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ, ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಉಪಸ್ಥಿತರಿದ್ದರು.





