ಸುಳ್ಯ: ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ ವರ್ಷದ ಎಂ.ಬಿ.ಎ. ಹಾಗೂ ಎಂ.ಟೆಕ್ ವಿದ್ಯಾರ್ಥಿಗಳಿಗೆ ಸ್ವಾಗತ ಕಾರ್ಯಕ್ರಮವು ಕೆ.ವಿ.ಜಿ.ಸಿ.ಇ. ಸಂಸ್ಥೆಯ ಸಭಾಂಗಣದಲ್ಲಿ ಫೆ.12ರಂದು ನಡೆಯಿತು. ವಿದ್ಯಾರಶ್ಮಿ ಸಮೂಹ ಶಿಕ್ಷಣಗಳ ಸಂಸ್ಥೆಗಳ ಆಡಳಿತಾಧಿಕಟರಿ ಹಾಗೂ ಏರ್ಬಸ್ ಆಸ್ಟ್ರೇಲಿಯ ಇಲ್ಲಿನ ಮಾಜಿ ಇಂಜಿನಿಯರ್ ಅಶ್ವಿನ್ ಎಲ್. ಶೆಟ್ಟಿ ಮುಖ್ಯ ಅತಿಥಿಯಾಗಿದ್ದರು. ಆಧುನಿಕ ಜೀವನದಲ್ಲಿ ಎಂ.ಬಿ.ಎ. ಮತ್ತು ಎಂ.ಟೆಕ್ ವಿದ್ಯಾರ್ಥಿಗಳು ಕೌಶಲ್ಯಾಭಿವೃದ್ಧಿ ಹಾಗೂ ಕಠಿಣ ಪರಿಶ್ರಮದಿಂದ
ಯಶಸ್ಸನ್ನು ಗಳಿಸಲು ಪೂರಕವಾದ ನಡವಳಿಕೆಯನ್ನು ಅಳವಡಿಸಿಕೊಳ್ಳಬೇಕೆಂದು ಹೇಳಿದರು.
ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು ಹಾಗೂ ಕೆವಿಜಿ ಇಂಜಿನಿಯರಿಂಗ್ ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ.ಉಜ್ವಲ್ ಯು.ಜೆ. ಮಾತನಾಡಿ ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು ಹೊಸ ತಂತ್ರಜ್ಞಾನಕ್ಕೆ ಅನುಗುಣವಾಗಿ ಕಾಲೇಜಿನ ಶೈಕ್ಷಣಿಕ ಪದ್ಧತಿಯಲ್ಲೂ ಅತೀ ಹೆಚ್ಚಿನ ಪ್ರಾಮುಖ್ಯತೆಯನ್ನು ಪ್ರಾಯೋಗಿಕ ವಿಷಯಗಳಿಗೆ ಹಾಗೂ ಉದ್ಯೋಗ ತರಬೇತಿಗಳನ್ನು ನೀಡುತ್ತಿದ್ದು ಇದರ ಸಂಪೂರ್ಣ ಪ್ರಯೋಜನವನ್ನು ಪಡೆದುಕೊಂಡು ಉತ್ತಮ ರೀತಿಯ ಉದ್ಯೋಗ ಪಡೆದು ಕಾಲೇಜಿಗೆ ಉತ್ತಮ ಹೆಸರು ತರಬೇಕೆಂದು ಶುಭಹಾರೈಸಿದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ.ಯವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಜೀವನದಲ್ಲಿ ಶಿಸ್ತು ಮತ್ತು ನೈಪುಣ್ಯತೆಯು ಉತ್ತಮ ಶ್ರೇಣಿಯನ್ನು ಗಳಿಸುವುದರೊಂದಿಗೆ ಯಶಸ್ವಿ ಜೀವನಕ್ಕೆ ಉನ್ನತ ವಿದ್ಯಾಭ್ಯಾಸದ ಅವಶ್ಯಕತೆಯನ್ನು ತಿಳಿಸಿದರು. ಕಾರ್ಯಕ್ರಮದಲ್ಲಿ ಎಂ.ಬಿ.ಎ. ವಿಭಾಗದ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ ಸ್ವಾಗತಿಸಿ,ಅತಿಥಿಗಳನ್ನು ಪರಿಚಯಿಸಿದರು. ಪ್ರೊ. ಮನೋಹರ್ ಎ.ಎನ್. ವಂದಿಸಿದರು. ಎಂ.ಬಿ.ಎ. ಅಂತಿಮ ವಿಭಾಗದ ವಿದ್ಯಾರ್ಥಿಗಳಾದ ಗಾಯತ್ರಿ ಎನ್. ನಂಬಿಯಾರ್ ಹಾಗು ಶಿಫಾ ಎಂ.ಎ. ಕಾರ್ಯಕ್ರಮ ನಿರೂಪಿಸಿದರು. ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ಎಂ.ಬಿ. ಎ. ವಿಭಾಗದ ಎಲ್ಲ ಬೋಧಕ, ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.