ಸುಳ್ತ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜು, ಎನ್.ಎಸ್.ಎಸ್. ಘಟಕದ ವತಿಯಿಂದ ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು. ಕಾಲೇಜಿನ ಸಿ.ಇ.ಒ. ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಉದ್ಘಾಟಿಸಿ ಮಾತನಾಡಿ ಮಾನಸಿಕ ಹಾಗೂ ದೈಹಿಕ ಆರೋಗ್ಯಕ್ಕೆ ದೈನಂದಿನ ಜೀವನದಲ್ಲಿ
ಯೋಗಾಭ್ಯಾಸ ಮಾಡುವುದು ಬಹಳ ಉತ್ತಮ ಎಂದರು.
ಉಪಪ್ರಾಂಶುಪಾಲ ಡಾ. ಶ್ರೀಧರ್ ಕೆ., ಯೋಗ ಗುರು ಎಂ.ಬಿ.ಎ. ವಿಭಾಗ ಮುಖ್ಯಸ್ಥ ಪ್ರೊ. ಕೃಷ್ಣಾನಂದ ಎ ಹಾಗೂ ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ವೇದಿಕೆಯಲ್ಲಿ ಉಪಸ್ಥಿತರಿದ್ದರು. ಪ್ರೊ. ಕೃಷ್ಣಾನಂದ ಎ. ಹಲವು ಯೋಗಾಸನಗಳು,ಧ್ಯಾನ ಮತ್ತು ಪ್ರಾಣಾಯಾಮಗಳ ಪ್ರಾತ್ಯಕ್ಷಿತೆ ನೀಡಿದರು.

ಕಾರ್ಯಕ್ರಮದಲ್ಲಿ ಎನ್.ಎಸ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ.ಸ್ವಾಗತಿಸಿದರು. ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಎನ್.ಎಸ್.ಎಸ್. ಸಂಯೋಜಕಿ
ಪ್ರೊ. ನಸೀಮಾ ಸಿ.ಎ. ಕಾರ್ಯಕ್ರಮ ನಿರ್ವಹಿಸಿದರು. ಸಿವಿಲ್ ಇಂಜಿನಿಯರಿಂಗ್ ವಿಭಾಗದ ಎನ್.ಎಸ್.ಎಸ್. ಸಂಯೋಜಕರಾದ ಪ್ರೊ. ಲಕ್ಷ್ಮೀ ನಾರಾಯಣ ಎನ್. ಹಾಗೂ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಸಹಕರಿಸಿದರು. ಯೋಗ ಕಾರ್ಯಕ್ರಮದಲ್ಲಿ ವಿಭಾಗದ ಡೀನ್ಗಳು, ವಿಭಾಗ ಮುಖ್ಯಸ್ಥರುಗಳು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿವರ್ಗದವರು ಭಾಗವಹಿಸಿ ಯೋಗ ಅಭ್ಯಾಸ ಮಾಡಿದರು.