ಸುಳ್ಯ: ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ 2022-23ನೇ ಶೈಕ್ಷಣಿಕ ವರ್ಷದ ವಿದ್ಯಾರ್ಥಿಗಳ ‘ಶೈಕ್ಷಣಿಕ ಪೂರ್ವಭಾವೀ ಚಟುವಟಿಕೆಗಳ ಉದ್ಘಾಟನಾ ಸಮಾರಂಭ ಕೆ.ವಿ.ಜಿ.ಸಿ.ಇ. ಸಭಾಂಗಣದಲ್ಲಿ ನಡೆಯಿತು. ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್‌ನ ಪ್ರಧಾನ ಕಾರ್ಯದರ್ಶಿ ಡಾ. ರೇಣುಕಾಪ್ರಸಾದ್ ಕೆ.ವಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅಧ್ಯಕ್ಷತೆ ವಹಿಸಿದ್ದರು. ‘ಕಾಲೇಜಿನಲ್ಲಿ ಹೊಸ ಶೈಕ್ಷಣಿಕ ಪದ್ಧತಿಯ ಅನುಸಾರವಾಗಿ ಕಾಲೇಜಿನ ಎಲ್ಲಾ ಮೂಲ ಸೌಕರ್ಯಗಳನ್ನು ಹೆಚ್ಚಿಸಿಕೊಂಡು ವಿದ್ಯಾರ್ಥಿ

ಸಮೂಹಕ್ಕೆ ಅನುಕೂಲವಾಗುವ ಹಾಗೆ ಸಿದ್ಧಗೊಂಡಿದೆ.ಇದರ ಸಂಪೂರ್ಣ ಪ್ರಯೋಜನವನ್ನು ವಿದ್ಯಾರ್ಥಿಗಳು ಪಡೆದುಕೊಳ್ಳಬೇಕೆಂದು ಆಶಿಸಿದರು. ಪ್ರತಿಯೊಬ್ಬ ವಿದ್ಯಾರ್ಥಿಗೂ ಅಂತಿಮ ಸೆಮಿಸ್ಟರ್ ವೇಳೆಗೆ ಕಾಲೇಜಿನ ಪ್ಲೇಸ್‌ಮೆಂಟ್ ಸೆಲ್ ವತಿಯಿಂದ ಉದ್ಯೋಗಾವಕಾಶವನ್ನು ಒದಗಿಸಿಕೊಡುವ ಭರವಸೆಯನ್ನು ನೀಡಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ
ಡಾ. ಉಜ್ವಲ್ ಯು.ಜೆ ಕಠಿಣ ಪರಿಶ್ರಮ, ಶಿಸ್ತು, ಶ್ರದ್ಧೆ ಇವೇ ಮುಂತಾದವುಗಳನ್ನು ಒಳಗೊಂಡ ಅಧ್ಯಯನವು ವಿದ್ಯಾರ್ಥಿಗಳಿಗೆ ಯಶಸ್ಸನ್ನು ತಂದು ಕೊಡುತ್ತವೆ ಎಂದು ಹೇಳಿದರು. ವಿದ್ಯಾರ್ಥಿ ಜೀವನದಿಂದಲೇ ಸಾಮಾಜಿಕ ಕಳಕಳಿಯೊಂದಿಗೆ ಸಮಾಜ ಸೇವೆಯಲ್ಲಿ ತೊಡಗಿಸಿಕೊಳ್ಳಲು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಡೀನ್ ಅಕಾಡೆಮಿಕ್ ಹಾಗೂ ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾದ ಡಾ. ಉಮಾಶಂಕರ್ ಕೆ.ಎಸ್. ಮಾತನಾಡಿದರು. ಉಪ ಪ್ರಾಂಶುಪಾಲ ಡಾ. ಶ್ರೀಧರ್ ಕೆ. ಸ್ವಾಗತಿಸಿ,ಸಿವಿಲ್ ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ
ಡಾ. ಚಂದ್ರಶೇಖರ್ ಎ. ವಂದಿಸಿಸರು. ಎಂ.ಬಿ.ಎ. ವಿದ್ಯಾರ್ಥಿನಿ ಅನುಷಾಲಕ್ಷ್ಮಿ ಪ್ರಾರ್ಥನೆಗೈದು, ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ಪ್ರೊ. ಅರುಣ ಪಿ.ಜಿ ಮತ್ತು ಸಿವಿಲ್ ಇಂಜಿನಿಯರಿಂಗ್ ವಿಭಾಗದ ಡಾ. ಲೇಖ ಬಿ.ಎಂ. ಕಾರ್ಯಕ್ರಮ ನಿರೂಪಿಸಿದರು.
ಕಾರ್ಯಕ್ರಮದಲ್ಲಿ ಎಲೆಕ್ಟ್ರಾನಿಕ್ಸ್ & ಕಮ್ಯುನಿಕೇಶನ್ ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥ ಡಾ. ಕುಸುಮಾಧರ ಎಸ್., ಎಂ.ಬಿ.ಎ. ವಿಭಾಗ ಮುಖ್ಯಸ್ಥರು ಪ್ರೊ. ಕೃಷ್ಣಾನಂದ ಎ., ಭೌತಶಾಸ್ತ್ರ ವಿಭಾಗ ಮುಖ್ಯಸ್ಥರು ಹಾಗು ಡೀನ್-ಎಕ್ಸಾಮಿನೇಶನ್ ಡಾ. ಪ್ರವೀಣ ಎಸ್.ಡಿ., ರಸಾಯನ ಶಾಸ್ತ್ರ ವಿಭಾಗ ಮುಖ್ಯಸ್ಥರು ಡಾ. ಸುರೇಖ ಎಂ., ಟ್ರೈನಿಂಗ್ & ಪ್ಲೇಸ್‌ಮೆಂಟ್ ಆಫೀಸರ್ ಪ್ರೊಫೆಸರ್ ಅನಿಲ್ ಬಿ.ವಿ.,
ಡೀನ್-ಅಡ್ಮಿಶನ್ ಪ್ರೊ. ಬಾಲಪ್ರದೀಪ್ ಕೆ.ಎನ್., ಡೀನ್-ಹಾಸ್ಟೆಲ್ ಡಾ. ಭಾಗ್ಯ ಹೆಚ್.ಕೆ., ಡೈರೆಕ್ಟರ್ ಆಫ್ ಪಿ.ಜಿ. ಸ್ಟಡೀಸ್ ಡಾ. ಸವಿತಾ ಎಂ., ಡೀನ್-ರೀಸರ್ಚ್ ಡಾ. ಸವಿತಾ ಸಿ.ಕೆ., ವಿದ್ಯಾರ್ಥಿ ಕ್ಷೇಮಾಧಿಕಾರಿಗಳಾದ ಡಾ. ಪ್ರಜ್ಞಾ ಎಂ.ಆರ್., ಪ್ರೊ. ಲೋಕೇಶ್ ಪಿ.ಸಿ., ಕೆ.ವಿ.ಜಿ.ಇಂಜಿನಿಯರಿಂಗ್ ಕಾಲೇಜಿನ ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ, ದೈಹಿಕ ಶಿಕ್ಷಣ ನಿರ್ದೇಶಕರಾದ ಭಾಸ್ಕರ್ ಎಸ್. ಬೇಲೆಗದ್ದೆ ಮತ್ತು ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.