ಸಳ್ಯ:ಕೆ.ವಿ.ಜಿ. ತಾಂತ್ರಿಕ ಮಹಾವಿದ್ಯಾಲಯದಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗ ಮುಖ್ಯಸ್ಥರಾರ ಡಾ. ಉಜ್ವಲ್ ಯು.ಜೆ.ಧ್ವಜಾರೋಹಣ ಮಾಡುವುದರೊಂದಿಗೆ ಆಚರಿಸಲಾಯಿತು. ಈ ಸಂದರ್ಭದಲ್ಲಿ ಮಾತನಾಡಿದ ಅವರು ದೇಶದಲ್ಲಿ
ಪ್ರಗತಿ ಕಾಣಬೇಕಾದರೆ ವಿದ್ಯಾರ್ಥಿಗಳಲ್ಲಿ ರಾಷ್ಟ್ರದ ಬಗ್ಗೆ ಅಭಿಮಾನವನ್ನು ಮೂಡಿಸಬೇಕು ಎಂದು ಕರೆ ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ ಮಾತನಾಡಿದರು. ವಿದ್ಯಾರ್ಥಿಗಳಾದ ತ್ರಿಶಾಲಿ ಮತ್ತು ಹವ್ಯ ಹಾಗೂ ಸಾಂಸ್ಕೃತಿಕ ಸಂಯೋಜಕರಾದ ಪ್ರೊ. ಕೃಷ್ಣರಾಜ್ ರಾಷ್ಟ್ರಗೀತೆಯನ್ನು ಹಾಡುವುದರ ಮೂಲಕ ಧ್ವಜ ವಂದನೆ ಸಲ್ಲಿಸಿದರು. ಕಾರ್ಯಕ್ರಮದಲ್ಲಿ
ಉಪ-ಪ್ರಾಂಶುಪಾಲರಾದ ಡಾ. ಶ್ರೀಧರ ಕೆ., ಎಲ್ಲಾ ವಿಭಾಗಗಳ ಮುಖ್ಯಸ್ಥರು, ಪ್ರಾಧ್ಯಾಪಕರುಗಳು ಹಾಗೂ ಕಾಲೇಜಿನ ಎಲ್ಲಾ ಬೋಧಕ, ಬೋಧಕೇತರ ಸಿಬ್ಬಂದಿಗಳು ಮತ್ತು ವಿದ್ಯಾರ್ಥಿಗಳು ಭಾಗವಹಿಸಿದ್ದರು.