ಸುಳ್ಯ:ಕೆ.ವಿ.ಜಿ. ಇಂಜಿನಿಯರಿಂಗ್ ಕಾಲೇಜಿನ ವಾರ್ಷಿಕ ಕ್ರೀಡಾಕೂಟ ಕಾಲೇಜಿನ ಕ್ರೀಡಾಂಗಣದಲ್ಲಿ ನಡೆಯಿತು. ಕ್ರೀಡಾ ಪ್ರೇರಕರಾದ ಯೋಗೀಶ ಚಿದ್ಗಲ್ ಉದ್ಘಾಟಿಸಿ ಮಾತನಾಡಿ ಶೈಕ್ಷಣಿಕ ಜೀವನದಲ್ಲಿ ಕ್ರೀಡೆಗಳ ಪಾತ್ರ ಅತೀ ಮುಖ್ಯ, ಕ್ರೀಡೆಯಿಂದ ಲಭಿಸುವ ಮೌಲ್ಯಗಳು ಅಕಾಡೆಮಿಕ್ ಹಾಗೂ ವೃತ್ತಿ ಜೀವನದಲ್ಲಿಯೂ ಯಶಸ್ಸು ಸಾಧಿಸಲು
ಸಹಾಯಕವಾಗುತ್ತವೆ ಎಂದು ಹೇಳಿದರು. ಮುಖ್ಯ ಅತಿಥಿಯಾಗಿದ್ದ ವಿ.ಟಿ.ಯು ಎಕ್ಸಿಕ್ಯುಟಿವ್ ಕೌನ್ಸಿಲ್ ಸದಸ್ಯರು,ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಹಾಗೂ ಕಂಪ್ಯೂಟರ್ ಸೈನ್ಸ್ & ಇಂಜಿನಿಯರಿಂಗ್ ವಿಭಾಗದ ಮುಖ್ಯಸ್ಥರಾದ ಡಾ. ಉಜ್ವಲ್ ಯು.ಜೆ. ಮಾತನಾಡಿ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳಲ್ಲಿ ತಂಡಸಹಕಾರ, ಸಾಮರಸ್ಯ ಮತ್ತು ನಾಯಕತ್ವವನ್ನು ಬೆಳೆಸಲು ಸಹಾಯ ಮಾಡುತ್ತವೆ. ಕ್ರೀಡೆಯಿಂದ ಶಾರೀರಿಕ ಹಾಗೂ ಮಾನಸಿಕ ಬೆಳವಣಿಗೆಯನ್ನು ಹೆಚ್ಚಿಸಬಹುದು ಎಂದರು.
ಕಾಲೇಜಿನ ಪ್ರಾಂಶುಪಾಲರಾದ ಡಾ. ಸುರೇಶ ವಿ. ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಕೆ.ವಿ.ಜಿ. ಇಂಟರ್ನ್ಯಾಶನಲ್ ಪಬ್ಲಿಕ್ ಸ್ಕೂಲ್ನ ದೈಹಿಕ ಶಿಕ್ಷಕರಾದ ಪ್ರಶಾಂತ್ ಕೆ. ಮತ್ತು ಆಶಾ ತೀರ್ಪುಗಾರರಾಗಿ ಸಹಕರಿಸಿದರು. ದೈಹಿಕ ಉಪನ್ಯಾಸಕರಾದ ಡಾ. ಎಂ.ಎಸ್. ರಾಜೇಶ್ ಕುಮಾರ್, ಪ್ರೊ. ಅಜಿತ್ ಬಿ.ಟಿ., ಎನ್.ಎಸ್. ಘಟಕಾಧಿಕಾರಿ ಪ್ರೊ. ಸತ್ಯಜಿತ್ ಎಂ. ಮತ್ತು ವಿದ್ಯಾರ್ಥಿ ಕ್ಷೇಮಾಧಿಕಾರಿಯಾದ ಪ್ರೊ. ಲೋಕೇಶ್ ಪಿ.ಸಿ ಕ್ರೀಡಾ ಕೂಟ ಸಂಯೋಜಿಸಿದರು. ಉಪ ಪ್ರಾಂಶುಪಾಲರಾದ ಡಾ. ಶ್ರೀಧರ್ ಕೆ, ಆಡಳಿತಾಧಿಕಾರಿ ನಾಗೇಶ್ ಕೊಚ್ಚಿ ಹಾಗೂ ಎಲ್ಲಾ ವಿಭಾಗದ ಮುಖ್ಯಸ್ಥರು, ಬೋದಕ, ಬೋದಕೇತರ ಸಿಬ್ಬಂಧಿಗಳು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.