ಸುಳ್ಯ:ಸುಳ್ಯದ ಹೆಸರು ದೇಶದ ಭೂಪಟದಲ್ಲಿ ಗುರುತಿಸುವಂತೆ ಮಾಡಿದ ಅಕ್ಷರ ಸಂತ, ಡಾ.ಕುರುಂಜಿ ವೆಂಕಟ್ರಮಣ ಗೌಡರು ಜನಮಾನಸದಲ್ಲಿ ಸದಾ ಅಜರಾಮರಾಗಿರುತ್ತಾರೆ ಎಂದು ಆದಿಚುಂಚನಗಿರಿ ಮಹಾಸಂಸ್ಥಾನ ಮಂಗಳೂರು ಶಾಖಾ ಮಠದ ಶ್ರೀ ಡಾ. ಧರ್ಮಪಾಲನಾಥ ಸ್ವಾಮಿಜಿ ಹೇಳಿದ್ದಾರೆ.ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ ವತಿಯಿಂದ ಕೆವಿಜಿ ಸಮೂಹ ಶಿಕ್ಷಣ ಸಂಸ್ಥೆಗಳ ಸ್ಥಾಪಕಾಧ್ಯಕ್ಷ ಡಾ.ಕುರುಂಜಿ ವೆಂಕಟ್ರಮಣ ಗೌಡರ 97ನೇ ಜನ್ಮ ದಿನಾಚರಣೆಯ ಅಂಗವಾಗಿ
ನೆಹರೂ ಸ್ಮಾರಕ ಮಹಾವಿದ್ಯಾಲಯದ ಸಭಾಂಗಣದಲ್ಲಿ ನಡೆದ ಸ್ಥಾಪಕರ ದಿನಾಚರಣೆ ಹಾಗೂ ನೆಹರೂ ಸ್ಮಾರಕ ಮಹಾ ವಿದ್ಯಾಲಯದ ಸುವರ್ಣ ಸಂಭ್ರಮ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಸುವರ್ಣ ಸಂಭ್ರಮದ ಲೋಗೋ ಬಿಡುಗಡೆ ಮಾಡಿ ಅವರು ಆಶೀರ್ವಚನ ನೀಡಿದರು. ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿಯ ಮೂಲಕ ಸಮಾಜ ಕಟ್ಟಿದ ಡಾ.ಕೆವಿಜಿ ಅವರ ಬದುಕು ಸರ್ವರಿಗೂ ಆದರ್ಶ, ಹಳ್ಳಿಯ ವಿದ್ಯಾರ್ಥಿಗಳಿಗೆ ಜ್ಞಾನ, ವಿಜ್ಞಾನದ ಅರಿವು ನೀಡಿ ಹಲವಾರು ಸಾಧಕರನ್ನು ಸೃಷ್ಟಿಸಿ ಸಮಾಜಕ್ಕೆ ನೀಡಿದ್ದಾರೆ ಎಂದು ಅವರು ಹೇಳಿದರು.

ಮುಖ್ಯ ಅತಿಥಿಯಾಗಿದ್ದ ಮಡಿಕೇರಿ ಶಾಸಕ ಡಾ.ಮಂಥರ್ ಗೌಡ ಸುವರ್ಣ ಸಂಭ್ರಮ ಮಾಹಿತಿ ಕೈಪಿಡಿ ಬಿಡುಗಡೆ ಮಾತನಾಡಿ ಗ್ರಾಮೀಣ ಭಾಗದಲ್ಲಿ ಶಿಕ್ಷಣ ಕ್ರಾಂತಿ ಮಾಡಿದ ಡಾ.ಕೆವಿಜಿಯವರು ಇಲ್ಲಿ ಅದ್ಭುತ ಸೃಷ್ಠಿಸಿದ್ದಾರೆ ಎಂದು ಬಣ್ಣಿಸಿದರು. ಕೆವಿಜಿ ಕುಟುಂಬದ ಎರಡನೇ ತಲೆಮಾರಿನ ಬಳಿಕ ಇದೀಗ ಮೂರನೇ ತಲಿಮಾರಿನ ಅಕ್ಷಯ್ ಕೆ.ಸಿ ಮತ್ತು ಡಾ.ಐಶ್ವರ್ಯ ಕೆ.ಸಿ ಅವರು ಶಿಕ್ಷಣ ಸಂಸ್ಥೆಗಳನ್ನು ಮುನ್ನಡೆಸಿ ಇನ್ನಷ್ಟು ಎತ್ತರಕ್ಕೆ ಕೊಂಡೊಯ್ಯುತ್ತಿರುವುದು ಅತ್ಯಂತ ಸಂತಸದ ವಿಷಯ ಎಂದು ಹೇಳಿದರು.
ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಅಧ್ಯಕ್ಷ ಡಾ. ಚಿದಾನಂದ ಕೆ.ವಿ. ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಪಂಚದ ಭೂಪಟದಲ್ಲಿ ಸುಳ್ಯವನ್ನು ಗುರುತಿಸುವಂತೆ ಮಾಡಿದ ಕೆವಿಜಿಯವರು ಹಾಕಿಕೊಟ್ಟ ಹಾದಿಯಲ್ಲಿ, ಅವರ ಆದರ್ಶವನ್ನು ಪಾಲಿಸಿ ನಾವು ಮುನ್ನಡೆಯುತ್ತಿದ್ದೇವೆ ಎಂದು ಹೇಳಿದರು.

ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಷನ್ನ ಪ್ರಧಾನ ಕಾರ್ಯದರ್ಶಿ ಆರ್ಕಿಟೆಕ್ಟ್ ಅಕ್ಷಯ್ ಕೆ.ಸಿ., ಎಒಎಲ್ಇ ಉಪಾಧ್ಯಕ್ಷೆ ಶೋಭಾ ಚಿದಾನಂದ, ಕಾರ್ಯದರ್ಶಿಗಳಾದ
ಡಾ.ಐಶ್ವರ್ಯ ಕೆ.ಸಿ, ಹೇಮನಾಥ್ ಕೆ.ವಿ, ಕೋಶಾಧಿಕಾರಿ ಡಾ.ಗೌತಮ್ ಗೌಡ ಎ.ಜಿ, ನಿರ್ದೇಶಕರಾದ ಜಗದೀಶ್ ಎ.ಹೆಚ್, ಮೀನಾಕ್ಷಿ ಕೆ.ಎಚ್, ಸ್ಥಾಪಕರ ದಿನಾಚರಣೆ ಸಮಿತಿ ಅಧ್ಯಕ್ಷ ಡಾ.ಲೀಲಾಧರ ಡಿ ವಿ, ಎನ್ಎಂಸಿ ಪ್ರಾಂಶುಪಾಲ ಡಾ.ರುದ್ರಕುಮಾರ್ ಎಂ.ಎಂ., ಕಾಲೇಜಿನ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು ಉಪಸ್ಥಿತರಿದ್ದರು.

ಎಒಎಲ್ಇ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಕೆ.ಸಿ ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿದರು. ಚಂದ್ರಶೇಖರ ಪೇರಾಲು ವಂದಿಸಿದರು.ಬೇಬಿ ವಿದ್ಯಾ ಪಿ.ಬಿ. ಹಾಗೂ ಮಿಥಾಲಿ.ಪಿ.ರೈ ಕಾರ್ಯಕ್ರಮ ನಿರೂಪಿಸಿದರು.
ಕೆವಿಜಿ ಶಿಕ್ಷಣ ಸಂಸ್ಥೆಗಳಲ್ಲಿ 25 ವರ್ಷಕ್ಕಿಂತ ಹೆಚ್ಚು ಕಾಲ ಸೇವೆ ಸಲ್ಲಿಸಿದವರನ್ನು ಗೌರವಿಸಲಾಯಿತು. ಬಳಿಕ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.
ಚಿತ್ರ:ನವೀನ್, ಸ್ಟುಡಿಯೋ ಗೋಪಾಲ್

















