ಸುಳ್ಯ:ಆಧುನಿಕ ಸುಳ್ಯದ ನಿರ್ಮಾತೃ ಡಾ. ಕುರುಂಜಿ ವೆಂಕಟ್ರಮಣ ಗೌಡರ 95ನೇ ಜಯಂತ್ಯೋತ್ಸವದ ಅಂಗವಾಗಿ ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ವತಿಯಿಂದ ಶ್ರೀ ಚೆನ್ನಕೇಶವ ದೇವಸ್ಥಾನದ ಮುಂಭಾಗದ ಸಭಾಂಗಣದಲ್ಲಿ ನಡೆಯುವ ಕೆ.ವಿ.ಜಿ ಸುಳ್ಯ ಹಬ್ಬ ಆಚರಣೆಗೆ ಡಿ.25 ರಂದು ಚಾಲನೆ ದೊರೆಯಿತು. ಎರಡು ದಿನಗಳ ಕಾಲ ನಡೆಯುವ ಸುಳ್ಯ ಹಬ್ಬದ ಪ್ರಯುಕ್ತ ನಡೆಯುವ ತಾಲೂಕು ಮಟ್ಟದ ಕ್ರೀಡಾ ಮತ್ತು
ಸಾಂಸ್ಕೃತಿಕ ಸ್ಫರ್ಧೆಗಳು ಆರಂಭಗೊಂಡಿದೆ. ಚೆನ್ನಕೇಶವ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರರಾದ ಡಾ. ಹರಪ್ರಸಾದ್ ತುದಿಯಡ್ಕ ದೀಪ ಬೆಳಗಿಸಿ ಉದ್ಘಾಟನೆ ನೆರವೇರಿಸಿದರು.
ಕ್ರೀಡಾಕೂಟಕ್ಕೆ ಕೊಡಿಯಾಲಬೈಲು ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಸತೀಶ್ ಕೊಯಿಂಗಾಜೆ ಚಾಲನೆ ನೀಡಿದರು.

ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಅಧ್ಯಕ್ಷ ಚಂದ್ರಶೇಖರ ಪೇರಾಲು ಅಧ್ಯಕ್ಷತೆ ವಹಿಸಿದ್ದರು. ಕೆವಿಜಿ ಸುಳ್ಯ ಹಬ್ಬ ಸಮಾಜ ಸೇವಾ ಸಂಘದ ಗೌರವಾಧ್ಯಕ್ಷ ಡಾ. ಕೆ.ವಿ. ಚಿದಾನಂದ ಗೌರವ ಉಪಸ್ಥಿತರಿದ್ದರು. ಸಂಘದ ಪ್ರಧಾನ ಕಾರ್ಯದರ್ಶಿ ದಿನೇಶ್ ಅಂಬೆಕಲ್ಲು, ಕೋಶಾಧಿಕಾರಿ ಜನಾರ್ಧನ ನಾಯ್ಕ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶರತ್ ಅಡ್ಕಾರ್ ಸ್ವಾಗತಿಸಿ, ಚಂದ್ರಮತಿ ವಂದಿಸಿದರು. ಜಲಜಾಕ್ಷಿ ಕಾರ್ಯಕ್ರಮ ನಿರೂಪಿಸಿದರು. ಬಳಿಕ ತಾಲೂಕು ಮಟ್ಟದ ವಿವಿಧ ಕ್ರೀಡಾ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಆರಂಭಗೊಂಡಿತು.

ಚಿತ್ರಗಳು:ನವೀನ್, ಸ್ಟುಡಿಯೋ ಗೋಪಾಲ್












