ಸುಳ್ಯ:ಕನ್ನಡ ಸಾಹಿತ್ಯ ಪರಿಷತ್ ಮೈಸೂರು ಘಟಕ ಮತ್ತು ಪರಿಕ್ಷಾ ಸ್ಪೂರ್ತಿ ಪೌಂಡೇಶನ್ ಇವರು ನೀಡುವ ರಾಜ್ಯ ಮಟ್ಟದ ಶಿಕ್ಷಕ ಸಾಧಕ ರತ್ನ ಪ್ರಶಸ್ತಿಯು ಕೆ.ವಿ.ಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನ ಶಿಕ್ಷಕಿ ಭವ್ಯ ಅಟ್ಲೂರು ಟವರಿಗೆ ದೊರೆತಿದೆ. ಕನ್ನಡ ವಿಷಯದಲ್ಲಿ ವಿದ್ಯಾರ್ಥಿಗಳನ್ನು ಪರಿಪೂರ್ಣ ರೀತಿಯಲ್ಲಿ
ತಯಾರು ಮಾಡಿ ಅವರಲ್ಲಿ ಶೇ 100 ಫಲಿತಾಂಶ ಪಡೆಯುವಲ್ಲಿ ಕನ್ನಡ ಭಾಷೆಯನ್ನು ಭೋದಿಸಿದ ಪ್ರಯತ್ನಕ್ಕೆ ಈ ಪ್ರಶಸ್ತಿ ನೀಡಿ ಗೌರವಿಸಲಾಗಿದೆ. ಇವರು ಕಳೆದ 8ವರ್ಷಗಳಿಂದ ಕೆ.ವಿ.ಜಿ.ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ಕನ್ನಡ ಭಾಷಾ ಶಿಕ್ಷಕಿಯಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇವರು ಕೆ.ವಿ.ಜಿ.ಪಾಲಿಟೆಕ್ನಿಕ್ ಸಿವಿಲ್ ವಿಭಾಗದ ಉದ್ಯೋಗಿ ದಯಾನಂದ ಅಟ್ಲೂರು ಅವರ ಪತ್ನಿ. ಇವರನ್ನು ಅಕಾಡೆಮಿ ಆಫ್ ಲಿಬರಲ್ ಎಜ್ಯುಕೇಶನ್ ಕಮಿಟಿ “ಬಿ” ಇದರ ಅಧ್ಯಕ್ಷರಾದ ಡಾ.ರೇಣುಕಾ ಪ್ರಸಾದ್ ಕೆ.ವಿ, ಕಾರ್ಯದರ್ಶಿಗಳಾದ ಡಾ.ಜ್ಯೋತಿ ಆರ್ ಪ್ರಸಾದ್, ನಿರ್ದೇಶಕರಾದ ಡಾ.ಅಭಿಜ್ಞಾ ಕೆ.ಆರ್ ಮತ್ತು ಮೌರ್ಯ ಆರ್ ಕುರುಂಜಿ ಹಾಗೂ ಸ್ಕೂಲ್ನ ಮುಖ್ಯಕಾರ್ಯನಿರ್ವಹಣಾಧಿಕಾರಿ ಡಾ.ಉಜ್ವಲ್ ಯು.ಜೆ. ಪ್ರಾಂಶುಪಾಲರಾದ ಅರುಣ್ ಕುಮಾರ್ ಅಭಿನಂದಿಸಿರುತ್ತಾರೆ.