ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಮಕ್ಕಳ ದಿನಾಚರಣೆ ನಡೆಯಿತು.ಪಂಡಿತ್ ಜವಾಹರಲಾಲ್ ನೆಹರು ರವರ ಭಾವಚಿತ್ರಕ್ಕೆ ಪುಷ್ಪ ನಮನವನ್ನು ಅರ್ಪಿಸಿ ಗೌರವ ಸಲ್ಲಿಸಲಾಯಿತು
ಪ್ರಾಂಶುಪಾಲರಾದ ಅನೀಶ್ ನಾದ್ ಮಕ್ಕಳ ದಿನಾಚರಣೆಯ ಬಗ್ಗೆ ಮಾತನಾಡಿದರು.ಶಾಲಾ ಶಿಕ್ಷಕ ವೃಂದದವರಿಂದ ಸಾಂಸ್ಕೃತಿಕ ಕಾರ್ಯಕ್ರಮವು ನಡೆಯಿತು. ಉಪ ಪ್ರಾಂಶುಪಾಲ ಶಿಲ್ಪ ಬಿದ್ದಪ್ಪ ಮತ್ತು ಎಲ್ಲಾ ಶಿಕ್ಷಕ -ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು. ಶಿಕ್ಷಕಿ ಸರ್ವಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.














