ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ವಿದ್ಯಾರ್ಥಿಗಳ ಚುನಾವಣಾ ಪ್ರಣಾಳಿಕೆಯು ಜೂನ್ 30ರಂದು ಪೂರ್ವಾಹ್ನ ನಡೆಯಿತು. ಈ ಕಾರ್ಯಕ್ರಮದಲ್ಲಿ ಶಾಲಾ ಪ್ರಾಂಶುಪಾಲರಾದ ಅರುಣ್ ಕುಮಾರ್ ಅವರು ಮತ್ತು ಉಪ ಪ್ರಾಂಶುಪಾಲರಾದ ಶಿಲ್ಪ ಬಿದ್ದಪ್ಪ ಉಪಸ್ಥಿತರಿದ್ದರು. ಪ್ರಾಂಶುಪಾಲರು ಮಾತನಾಡಿ ಪ್ರಣಾಳಿಕೆಯಲ್ಲಿ
ತಾವು ಏನು ಮಂಡಿಸುತ್ತೀರೋ ಅದನ್ನು ಕಾರ್ಯರೂಪಕ್ಕೆ ತಂದು ಶಾಲೆಯ ಅಭಿವೃದ್ಧಿಗಾಗಿ ಶ್ರಮಿಸಬೇಕು ಎಂದು ನಿರ್ಣಾಯಕರಾಗಿ ಶಿಕ್ಷಕಿಯರಾದ ಜ್ಯೋತ್ಸ್ನ ಹಾಗೂ ಕೀರ್ತನ ಸಹಕರಿಸಿದರು. ಶಿಕ್ಷಕಿಯರಾದ ಧನ್ಯಮೋಳ್ ಮತ್ತು ಶೋಭಾ ಕಾರ್ಯಕ್ರಮದ ನೇತೃತ್ವ ವಹಿಸಿದರು. 8,9,10ನೇ ತರಗತಿ ವಿದ್ಯಾರ್ಥಿಗಳು ಮತ ಚಲಾಯಿಸುವುದರ ಮೂಲಕ
ಅಪರಾಹ್ನ ವಿದ್ಯಾರ್ಥಿಗಳಿಂದ ಚುನಾವಣೆಯು ನಡೆಯಿತು. 10ನೇ ತರಗತಿಯ ವಿದ್ಯಾರ್ಥಿನಿಯರಾದ ಚಾರ್ವಿ ಮತ್ತು ಸಾನ್ವಿ ಕಾರ್ಯಕ್ರಮ ನಿರೂಪಿಸಿದರು ಶಿವಾನಿ ವಂದಿಸಿದರು