ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಸ್ಕೂಲ್ನಲ್ಲಿ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.9ನೇ ತರಗತಿಯ ಲೀಲಾಧರ್ ಮತ್ತು ಮಾನ್ಯ ‘ಭೂಮಿ ನಮ್ಮದಲ್ಲ. ನಾವು ಭೂಮಿಗೆ ಸೇರಿದವರು. ಆದುದರಿಂದ ಪರಿಸರ ಸಂರಕ್ಷಣೆಯ ಜವಾಬ್ದಾರಿ ಒಬ್ಬ ವ್ಯಕ್ತಿಯಿಂದ ಸಾಧ್ಯವಿಲ್ಲ. ಅದು
ನಮ್ಮೆಲ್ಲರ ಆದ್ಯ ಕರ್ತವ್ಯ ಎಂದು ಪರಿಸರ ದಿನದ ಮಹತ್ವದ ಬಗ್ಗೆ ತಿಳಿಸಿಕೊಟ್ಟರು. ವಿದ್ಯಾರ್ಥಿನಿಯರು ಪರಿಸರ ಗೀತೆಯನ್ನು ಹಾಡಿದರು. ಹುಡುಗರು ಕಾಡಿನಿಂದ ಆಗುವ ಪ್ರಯೋಜನಗಳ ಕುರಿತು ಮೈಮ್ ಶೋ ನಡೆಸಿದರು. ಪರಿಸರ ಸಂರಕ್ಷಣೆಯ ಕುರಿತು ಪ್ರತಿಜ್ಞಾವಿಧಿಯನ್ನು ವೃಂದ ಜಿ ರಾವ್ ಬೋಧಿಸಿದರು. ಝಿಬ ಮತ್ತು ಸಾನಿಧ್ಯ. ಕೆ ಕಾರ್ಯಕ್ರಮ ನಿರೂಪಿಸಿದರು. ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ ಮತ್ತು ವಿಜ್ಞಾನ ವಿಭಾಗದ ಶಿಕ್ಷಕಿಯರು ಶಾಲಾ ವಿದ್ಯಾರ್ಥಿಗಳಿಗೆ ಗಿಡಗಳನ್ನು ಹಸ್ತಾಂತರಿಸಿದರು.ಕಾರ್ಯಕ್ರಮದಲ್ಲಿ ಎಲ್ಲಾ ವಿದ್ಯಾರ್ಥಿಗಳು, ಶಿಕ್ಷಕರು ಮತ್ತು ಶಿಕ್ಷಕೇತರ ವೃಂದದವರು ಉಪಸ್ಥಿತರಿದ್ದರು.













