ಸುಳ್ಯ:ಕೆವಿಜಿ ಇಂಟರ್ ನ್ಯಾಷನಲ್ ಪಬ್ಲಿಕ್ ಶಾಲೆಯಲ್ಲಿ ಜೆ ಇ ಇ ಮತ್ತು ನೀಟ್ ತರಗತಿಗಳ ಉದ್ಘಾಟನೆ ಅ. 7 ರಂದು ನಡೆಯಿತು.
ಕೆ ವಿ ಜಿ ಅಮರ ಜ್ಯೋತಿ ಪಿಯು ಕಾಲೇಜಿನ ಪ್ರಾಂಶುಪಾಲೆ ಡಾ. ಯಶೋಧ ರಾಮಚಂದ್ರ ಉದ್ಘಾಟಿಸಿದರು.’ಕಾರ್ಯಕ್ರಮದ
ಅಧ್ಯಕ್ಷತೆಯನ್ನು ಶಾಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಉಜ್ವಲ್ ಯು. ಜೆ ಅಧ್ಯಕ್ಷತೆ ವಹಿಸಿದ್ದರು. ಬಳಿಕ ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕಿ ಭವ್ಯ ಸಿ ಟಿ ಪ್ರೌಢಶಾಲಾ ಹಂತದಲ್ಲಿ ಜೆಇ ಇ ಮತ್ತು ನೀಟ್ ತರಗತಿಗಳ ಅವಶ್ಯಕತೆಗಳ ಕುರಿತು ಸಂಕ್ಷಿಪ್ತವಾಗಿ ತಿಳಿಸಿದರು. ಈ ಕಾರ್ಯಕ್ರಮವನ್ನು 9ನೇ ತರಗತಿಯ ಶಮ್ಯ ನಿರೂಪಿಸಿ ಅಬ್ದುಲ್ ಮನನ್ ವಂದಿಸಿದನು.ಈ ಕಾರ್ಯಕ್ರಮದಲ್ಲಿ ಕೆವಿಜಿ ಐಪಿಎಸ್ ನ ಉಪ ಪ್ರಾಂಶುಪಾಲೆ ಶಿಲ್ಪ ಬಿದ್ದಪ್ಪ, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪ ಪ್ರಾಂಶುಪಾಲ ದೀಪಕ್ ವೈ ಆರ್, ಕೆವಿಜಿ ಡೆಂಟಲ್ ಕಾಲೇಜಿನ ಉಪ ಪ್ರಾಂಶುಪಾಲೆ ಡಾ. ಶೈಲಾ, ಕೆ ಜಿ ಐ ಪಿ ಎಸ್ ನ ಆಡಳಿತ ಸಂಯೋಜನಾಧಿಕಾರಿ ರೇಣುಕಾ ಉತ್ತಪ್ಪ, ಶಾಲಾ ಪ್ರಚಾರ ಸಂಯೋಜನಾಧಿಕಾರಿ ಸುಜಿತ್, ಕೆವಿಜಿ ಅಮರ ಜ್ಯೋತಿ ಪಿಯು ಕಾಲೇಜಿನ ಉಪನ್ಯಾಸಕರು, ಕೆವಿಜಿ ಐಪಿಎಸ್ ನ ಶಿಕ್ಷಕರು, ಪೋಷಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.